ಆಪರೇಷನ್ ಸಿಂಧೂರ ಕಾರ್ಯಾಚರಣೆ | ಭಾರತದ ಮೇಲಿನ ದಾಳಿಯನ್ನು ವಿಫಲಗೊಳಿಸಿದ ಭಾರತೀಯ ಸೇನೆ

ನವದೆಹಲಿಆಪರೇಷನ್ ಸಿಂದೂರ್ ಕಾರ್ಯಾಚರಣೆಗೆ ಪ್ರತಿಯಾಗಿ ಪಾಕಿಸ್ತಾನ ಭಾರತದ ಮೇಲೆ ನಡೆಸಲು ಉದ್ದೇಶಿಸಲಾಗಿದ್ದ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ನೆನ್ನೆ ರಾತ್ರಿ ಪಾಕಿಸ್ತಾನ ಭಾರತದ 15 ನಗರಗಳನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಲು ಯತ್ನಿಸಿತ್ತು ಈ ದಾಳಿಯನ್ನು ಭಾರತ 9 ಏರ್ ಡಿಫೆನ್ಸ್ ಸಿಸ್ಟಮ್ ನ್ನು ನಾಶ ಮಾಡುವ ಮೂಲಕ ತಡೆಗಟ್ಟಿದೆ.

ಅಲರ್ಟ್ ಆಗಿರುವ ಭಾರತೀಯ ಸೇನೆ ಲಾಹೋರ್ ನಲ್ಲಿ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ನ್ನು ಎಸ್-400 ಕ್ಷಿಪಣಿ ವ್ಯವಸ್ಥೆಯನ್ನು ಬಳಸಿ ಧ್ವಂಸಗೊಳಿಸಿದೆ. ಈ ಬಗ್ಗೆ ಭಾರತೀಯ ಸೇನೆ ಅಧಿಕೃತ ಮಾಹಿತಿ ಪ್ರಕಟಿಸಿದ್ದು ದಾಳಿಯನ್ನು ಖಚಿತಪಡಿಸಿದೆ.

ಪಾಕಿಸ್ತಾನ ಚೀನಾದಿಂದ HQ-9 ಏರ್ ಡಿಫೆನ್ಸ್ ಸಿಸ್ಟಮ್ ನ್ನು ಪಡೆದಿತ್ತು ಈಗ ಈ ವ್ಯವಸ್ಥೆಯನ್ನು ಭಾರತ ಸಂಪೂರ್ಣ ನಾಶ ಮಾಡಿದೆ. ದಾಳಿಯನ್ನು ಪಾಕಿಸ್ತಾನ ಸಹ ಖಚಿತಪಡಿಸಿದ್ದು, ದಾಳಿಯಲ್ಲಿ ನಾಲ್ವರು ಪಾಕಿಸ್ತಾನದ ಯೋಧರು ಗಾಯಗೊಂಡಿದ್ದಾರೆ ಎಂದು ತಿಳಿಸಿದೆ.

















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top