ನೆಲ್ಯಾಡಿ: ಯುವಕನೋರ್ವನನ್ನು ಮನೆ ಅಂಗಳದಲ್ಲೇ ಇರಿದು ಹತ್ಯೆ ನಡೆಸಿದ ಘಟನೆ ನೆಲ್ಯಾಡಿಯ ಮಾದೇರಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ.
ಮೃತ ಯುವಕನನ್ನು ಮಾದೇರಿ ನಿವಾಸಿ ಶರತ್ ಎಂದು ಗುರುತಿಸಲಾಗಿದೆ.
ಕೌಟುಂಬಿಕ ಕಲಹವೇ ಘಟನೆಗೆ ಕಾರಣ ಎಂದು ಹೇಳಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.