ಮೇ 20 : ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ರಾಜ್ಯವ್ಯಾಪಿ ಜನಾಂದೋಲನ | ಪತ್ರಿಕಾಗೋಷ್ಠಿಯಲ್ಲಿ ನೀರಜ್ ದೋನೆರಿಯಾ

ಪುತ್ತೂರು ; ಕಾರಿಂಜ ಸಮೀಪದ ಪುಳಿಮಜಲು ನಿವಾಸಿ, ಹಿಂದೂ ಸಂಘಟನೆ ಕಾರ್ಯಕರ್ತ ಬಜರಂಗದಳದ ಗೋ ರಕ್ಷಾ ಪ್ರಮುಖ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ರಾಜ್ಯವ್ಯಾಪಿ ಜನಾಂದೋಲನಕ್ಕೆ ವಿಹಿಂಪ ಬಜರಂಗಳ ಯೋಜನೆ ರೂಪಿಸಿದೆ. ಮೇ ೨೦ಕ್ಕೆ ಮಂಗಳೂರಿನಲ್ಲಿ ಬೃಹತ್ ಆಂದೋಲನ ನಡೆಯಲಿದೆ ಎಂದು ಬಜರಂಗದಳದ ರಾಷ್ಟ್ರೀಯ ಸಂಯೋಜಕ ನೀರಜ್ ದೋನೆರಿಯಾ ಹೇಳಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸುಹಾಸ್ ಶೆಟ್ಟಿಯವರ ಹತ್ಯೆಯನ್ನು ಹಿಂದುಗಳನ್ನು ಭಯದ ವಾತಾವರಣಕ್ಕೆ ತಳ್ಳುವ ಮತ್ತು ಧರ್ಮ ರಕ್ಷಣೆ ಮಾಡದಂತೆ ಜೊತೆಗೆ ಜಮ್ಮು ಕಾಶ್ಮೀರದಲ್ಲಿ ಹಿಂದುಗಳನ್ನು ಗುರಿ ಮಾಡಿ ಹತ್ಯೆ ಮಾಡಿದ ರೀತಿಯಲ್ಲಿ ನಡೆಸಲಾಗಿದೆ. ಹಾಗಾಗಿ ಸುಹಾಸ್ ಶೆಟ್ಟಿ ಹತ್ಯೆಯು ಕೂಡಾ ಪೂರ್ಣ ಮಟ್ಟದ ಪೂರ್ವಯೋಜನೆ ಮಾಡಿಕೊಂಡು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಈ ಹತ್ಯೆಯ ಹಿಂದೆ ನಿಷೇಧಿ ಸಂಘಟನೆ ಪಿಎಫ್ಐ ಕಾರ್ಯಕರ್ತರು ಭಾಗಿಯಾಗಿದ್ದು, ಅಂತರರಾಜ್ಯ ಮತ್ತು ಅಂತರರಾಷ್ಟ್ರೀಯ ಮಟ್ಟದಿಂದ ಹಣಕಾಸು ಪೂರೈಕೆಯಾಗಿದೆ. ಸ್ಲೀಪರ್ ಸೆಲ್ ಮಾದರಿಯಲ್ಲಿ ಈ ಹತ್ಯೆ ನಡೆದಿದೆ. ಹಾಗಾಗಿ ಯಾವುದೇ ಒತ್ತಡಕ್ಕೆ ಒಳಗಾಗದೇ ಈ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಬೇಕು ಎಂದು ನಾವು ಆಗ್ರಹಿಸುತ್ತೇವೆ. ಈ ಕುರಿತು ಸ್ವತಃ ಸುಹಾಸ್ ಅವರ ತಂದೆ ಮೊಹನ್ ಶೆಟ್ಟಿ, ತಾಯಿ ಸುಲೋಚನಾ ಶೆಟ್ಟಿ ಅವರು ತನಿಖೆಯನ್ನು ಎನ್‌ಐಎಗೆ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ ಎಂದರು.

ಯಾಕೆಂದರೆ  ಈ ಹಿಂದೆ ನಡೆದ ಹರ್ಷ ಮತ್ತು ಪ್ರವೀಣ್ ನೆಟ್ಟಾರು ಹತ್ಯೆಯು ಇದೇ ರೀತಿ ನಡೆದಿದೆ ಜೊತೆಗೆ ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ ದುಷ್ಕರ್ಮಿಗಳು ಮತ್ತೆ ಬಜರಂಗಳದ ಭರತ್ ಮತ್ತು ಶರಣ್ ಅವರಿಗೂ ಕೊಲೆ ಬೆದಿಕೆಯೊಡ್ಡಿದ್ದಾರೆ. ಹಾಗಾಗಿ ತನಿಖೆಯನ್ನು ಎನ್‌ಐಗೆ ವಹಸುವಂತೆ ರಾಜ್ಯವ್ಯಾಪಿ ಜನಾಂದೋಲನಕ್ಕೆ ವಿಹಿಂಪ ಬಜರಂಗಳ ಯೋಜನೆ ರೂಪಿಸಿದೆ. ಮೇ ೨೦ಕ್ಕೆ ಮಂಗಳೂರಿನಲ್ಲಿ ಬೃಹತ್ ಆಂದೋಲನ ನಡೆಯಲಿದೆ ಎಂದು ಅವರು ಹೇಳಿದರು.

















































 
 

ಹತ್ಯೆಗೆ ರಾಜಕೀಯ ಕೈವಾಡ :

ಸುಹಾಸ್ ಶೆಟ್ಟಿ ಹತ್ಯೆಯ ಹಿಂದೆ ರಾಜಕೀಯ ಕೈವಾಡವೂ ಇದೆ. ಯಾಕೆಂದರೆ ಸುಹಾಸ್ ಶೆಟ್ಟ ಹತ್ಯೆಯಾದ ಬಳಿಕ ಇಲ್ಲಿನ ತನಕ ಅವರ ಮನೆಗೆ ಸರಕಾರದಿಂದ ಜನಪ್ರತಿನಿಧಿಗಳು ಸೌಜನ್ಯಕ್ಕಾದರೂ ಭೇಟಿ ನೀಡಿಲ್ಲ. ಜೊತೆಗೆ ಯಾವುದೇ ಆರ್ಥಿಕ ನೆರವನ್ನೂ ನೀಡಿಲ್ಲ. ಆದರೆ ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸಲಾಗಿದೆ ಎನ್ನುವ ಪೊಲೀಸರು ಆರೋಪಿಗಳಿಗೆ ಮುಖಗವಸು ಹಾಕಿ ಮಾದ್ಯಮದ ಮುಂದೆ ತೋರಿಸಿದ್ದಾರೆ. ಆದರೆ ಮುಖಗವಸಿನ ಒಳಗೆ ನಿಜವಾಗಿ ಕೊಲೆ ಮಾಡಿದ ಆರೋಪಿ ಇದ್ದಾರೋ ಇಲ್ಲವೂ ನಮಗೆ ಅನುಮಾನ ಸುರುವಾಗಿದೆ. ಹಾಗಾಗಿ ಹತ್ಯೆಗೆ ರಾಜಕೀಯ ಕೈವಾಡ ಇದೆಯೇ ಎಂಬ ಸಂಶಯ ಮೂಡಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಜರಂಗದಳ ಪ್ರಾಂತ ಸಹಸಂಯೋಜಕ ಗೋವರ್ಧನ್, ಮಂಗಳೂರು ವಿಭಾಗ ಸಂಯೋಜಕ ಪುನಿತ್ ಅತ್ತಾವರ, ವಿಶ್ವಹಿಂದು ಪರಿಷದ್ ಜಿಲ್ಲಾ ಸಹಕಾರ್ಯದರ್ಶಿ ಶ್ರೀಧರ್ ತೆಂಕಿಲ, ಹರೀಶ್ ದೋಳ್ಪಾಡಿ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top