ಸುಳ್ಯ: ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಅರಂತೋಡು ಗ್ರಾಮದ ಕಿರ್ಲಾಯದಲ್ಲಿ ನಡೆದಿದೆ.
ಮೃತಪಟ್ಟವರು ಅಡಬಳೆ ವಾಸುದೇವ ಎನ್ನಲಾಗಿದೆ. ತೆಂಗಿನಕಾಯಿ ತೆಗೆಯಲೆಂದು ಮರಕ್ಕೆ ಹತ್ತಿದ್ದ ವೇಳೆ ಆಯತಪ್ಪಿ ಕೆಳಕ್ಕೆ ಬಿದ್ದು ತೀವ್ರ ಗಾಯಗೊಂಡಿದ್ದರು.
ತಕ್ಷಣ ವಾಸುದೇವ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ನಾಲ್ವರು ಮಕ್ಕಳನ್ನು ಅಗಲಿದ್ದಾರೆ.