ನವದೆಹಲಿ: ಕಳ್ಳಭಟ್ಟಿ ಸಾರಾಯಿ ಸೇವಿಸಿ ಕನಿಷ್ಠ 16 ಮಂದಿ ಸಾವಿಗೀಡಾದ ಘಟನೆ ಪಂಜಾಬಿನ ಅಮೃತಸರ ಜಿಲ್ಲೆಯ ಐದು ಹಳ್ಳಿಗಳಲ್ಲಿ ಸಂಭವಿಸಿದೆ. ಈ ದುರಂತಕ್ಕೆ ಸಂಭವಿಸಿ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಐದು ಹಳ್ಳಿಗಳ ಜನ ನಿನ್ನೆ ರಾತ್ರಿ ಕಳ್ಳಭಟ್ಟಿ ಸೇವಿಸಿ ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಕನಿಷ್ಠ 6 ಮಂದಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾತ್ರಿ 9.30ರ ವೇಳೆಗೆ ಜನರು ಕಳ್ಳಭಟ್ಟಿ ಸಾರಾಯಿ ಸೇವಿಸಿ ತೀವ್ರ ಅಸ್ವಸ್ಥರಾಗತೊಡಗಿದರು. ಪೊಲೀಸರು ಸ್ಥಳಕ್ಕೆ ತಲುಪುವಷ್ಟರಲ್ಲಿ 16 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಪ್ರಭಜೀತ್ ಸಿಂಗ್ ಎಂಬಾತ ಕಳ್ಳಭಟ್ಟಿ ಸಾರಾಯಿ ಪೂರೈಸಿದಾತ. ಸಾಹಬ್ ಸಿಂಗ್ ಎಂಬಾತ ಕಳ್ಳಭಟ್ಟಿ ಸಾರಾಯಿ ದಂಧೆಯ ಕಿಂಗ್‌ಪಿನ್ ಆಗಿದ್ದು, ಆತನನ್ನು ಸೇರಿಸಿ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.