ಮಡಿಕೇರಿ : ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ 8 ಜನ ಯುವಕರಲ್ಲಿ ಇಬ್ಬರು ನೀರಿನಲ್ಲಿ ಮುಳುಗಿದ ಘಟನೆ ಮಡಿಕೇರಿ ತಾಲೂಕಿನ ನಾಪೊತ್ತು ಸಮೀಪದ ಎಮ್ಮೆಮಾಡುವಿನ ಕೂರುಳಿಯಲ್ಲಿ ನಡೆದಿದೆ.
ಚೇರಂಬಾಣೆ ಮೂಲದ ಗಿರೀಶ್ (16) ಮತ್ತು ಅಯ್ಯಪ್ಪ (18) ಕಾವೇರಿ ನದಿಯಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದಾರೆ.
ಇಬ್ಬರ ಪೈಕಿ ಓರ್ವನ ಮೃತದೇಹ ದೊರಕಿದೆ. ಇನ್ನೋರ್ವನ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ನಾಪೊಗ್ಗು ಪಿಎಸ್‌ಐ ಮಂಜುನಾಥ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.