ಪುತ್ತೂರು : ರೋಹಿಣಿ ಹೊಲಿಗೆ ಅರ್ಟ್ಸ್ ಆಂಡ್ ಕ್ರಾಫ್ಟ್ ತರಬೇತಿ ಕೇಂದ್ರ ಹಾಗೂ ಲಯನ್ಸ್ ಕ್ಲಬ್ ಜಂಟಿ ಆಶ್ರಯದಲ್ಲಿ ಕೃತಕ ಹೂಗಳ ಪ್ರದರ್ಶನ ಮಾ.15 ರಿಂದ 17 ರ ತನಕ ಪುತ್ತೂರು ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ.
ಶಾಸಕ ಸಂಜೀವ ಮಠಂದೂರು ಪ್ರದರ್ಶನವನ್ನು ಉದ್ಘಾಟಿಸಲಿದ್ದು, ಲಯನ್ಸ್ ಕ್ಲಬ್ ಅಧ್ಯಕ್ಷ ಕೇಶವ ನಾಯ್ಕ ಅಧ್ಯಕ್ಷತೆ ವಹಿಸುವರು. ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ದೀಪ ಪ್ರಜ್ವಲನೆ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ಶಿಶು ಅಭಿವೃದ್ಧಿ ಯೋಜಣಾಧಿಕಾರಿ ಶ್ರೀಲತಾ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರೆನ್ನಿ ಡಿ’ಸೋಜಾ, ತಾಲೂಕು ಮಹಿಳಾ ಒಕ್ಕೂಟದ ಅಧ್ಯಕ್ಷೆ ಶಾಂತಿ ಹೆಗಡೆ, ಲಯನ್ಸ್ ಕ್ಲಬ್ ಕಾರ್ಯದರ್ಶಿ ಗಣೇಶ್ ಶೆಟ್ಟಿ ಕೆ., ಕೋಶಾಧಿಕಾರಿ ಗಣೇಶ್ ಶೆಟ್ಟಿ ಪಿ., ಜಿಲ್ಲಾ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಅಧ್ಯಕ್ಷೆ ನಯನಾ ರೈ ಪಾಲ್ಗೊಳ್ಳಲಿದ್ದಾರೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
























