ಬೂಟಾಟಿಕೆಗೆ ನಾಲ್ಕು ಫ್ಲೈಟ್‌ ಕಳಿಸಿದ್ದಾರಷ್ಟೆ

ಆಪರೇಷನ್‌ ಸಿಂದೂರ ಬಗ್ಗೆ ಕಾಂಗ್ರೆಸ್‌ ಶಾಸಕ ಲೇವಡಿ

ಕೋಲಾರ: ಕೇಂದ್ರ ಸರ್ಕಾರ ಬೂಟಾಟಿಕೆಗೆ ನಾಲ್ಕು ಫ್ಲೈಟ್ ಮೇಲೆ ಕಳಿಸಿದ್ದು ಬಿಟ್ರೆ ಏನೂ ಮಾಡಿಲ್ಲ ಎಂದು ಆಪರೇಷನ್‌ ಸಿಂಧೂರ ಕುರಿತು ಕಾಂಗ್ರೆಸ್‌ ಶಾಸಕ ಕೊತ್ತೂರು ಮಂಜುನಾಥ್‌ ಲೇವಡಿ ಮಾಡಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 26 ಜನ ಮಹಿಳೆಯರ ಅರಿಶಿನ ಕುಂಕುಮಕ್ಕೆ ಬೆಲೆ ಇಷ್ಟೆನಾ? ಆ ಹೆಣ್ಣು ಮಕ್ಕಳಿಗೆ ಸಿಕ್ಕ ಪರಿಹಾರ ಇದೇನಾ? ಸಾಮಾನ್ಯ ಪ್ರಜೆಗಳ ಮೇಲೆ ಯುದ್ಧ ಮಾಡೋದಕ್ಕೆ ನಮ್ಮ ವಿರೋಧವಿದೆ. ಆದರೆ ನಮ್ಮ ದೇಶದೊಳಗೆ ಬಂದು ಪತ್ನಿಯರ ಎದುರೇ ಗಂಡಂದಿರನ್ನ ಹೊಡೆದ್ರೆ ಹೇಗೆ ಸಹಿಸೋದು? ಆ ಹೆಣ್ಣು ಮಕ್ಕಳು ಗಟ್ಟಿಯಾಗಿರೋದಕ್ಕೆ ಪರವಾಗಿಲ್ಲ. ಇಲ್ಲಾ ಅಂದ್ರೆ ಹಾರ್ಟ್ ಅಟ್ಯಾಕ್ ಆಗಿ ಸಾಯಬೇಕಿತ್ತು. ಅಂತಹದಕ್ಕೆ ಪರಿಹಾರ ಇದಲ್ಲ, ಬೇರಿಂದ ಕೊಂಬೆ ತನಕ ಎಲ್ಲವನ್ನೂ ಹೊಡೆಯಬೇಕು. ಭಾರತಕ್ಕೆ ಒಳ್ಳೆಯ ಅವಕಾಶ ಇತ್ತು. ಆದರೆ ಏನೂ ಮಾಡಿಲ್ಲ ಅನ್ನೋದು ಬೇಸರ ತಂದಿದೆ ಅಂತ ಹೇಳಿದ್ದಾರೆ.

ʻಆಪರೇಷನ್‌ ಸಿಂಧೂರʼ ಹೆಸರಲ್ಲಿ ಅಷ್ಟು ಜನ ಇಷ್ಟು ಜನ ಉಗ್ರರನ್ನು ಹೊಡೆದಿದ್ದೇವೆ ಅಂತಾರೆ. ಆದರೆ ಇಲ್ಲಿಯವರೆಗೂ ಎಲ್ಲೂ ಕನ್‌ಫರ್ಮ್‌ ಆಗಿಲ್ಲ. ಮಾಧ್ಯಮಗಳಲ್ಲಿ ಬಂದಿದ್ದು ಬಿಟ್ರೆ ಬೇರೆಲ್ಲೂ ನೋಡಲಿಲ್ಲ. ನಮ್ಮ ದೇಶಕ್ಕೆ ಬಂದು ನಮ್ಮನ್ನು ಹೊಡೆದು ತಪ್ಪಿಸಿಕೊಂಡು ಹೋಗ್ತಾರೆ ಅಂದ್ರೆ ನಮ್ಮ ಭದ್ರತಾ ವೈಪಲ್ಯ, ಗಡಿಯಲ್ಲಿ ಸೇನೆ ಏನ್ ಮಾಡ್ತಾ ಇತ್ತು? ಇವರೆ ಏನಾದ್ರು ಪ್ಲಾನ್ ಮಾಡಿದ್ರಾ? ಅವರನ್ನು (ಉಗ್ರರು) ಇವರೇ ಪ್ಲಾನ್ ಬಿಟ್ಟುಕೊಂಡ್ರ ಯಾವುದು ನಿಜ ಯಾವುದು ಸುಳ್ಳು ನಮಗೆ ಗೊತ್ತಿಲ್ಲ. ಆದರೆ ಭಾರತ ಕೊಟ್ಟ ಪ್ರತ್ಯುತ್ತರ ಸಮಧಾನಕರವಾದ ಕ್ರಮ ಅಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.



















































 
 

ಉಗ್ರವಾದವನ್ನ ಬೇರು ಸಮೇತ ಕಿತ್ತೋಗೆಯಲು ಒಳ್ಳೆಯ ಚಾನ್ಸ್ ಇತ್ತು. ಆದರೆ ನಮ್ಮ ನಿರೀಕ್ಷೆ ಹುಸಿಯಾಗಿದೆ. ಕದನ ವಿರಾಮ ಎಂದು ಹೇಳುವ ನೀವು ಇಸ್ರೇಲ್ ನೋಡಿ ಕಲಿಯಬೇಕಿದೆ, ಇಸ್ರೇಲ್ ಯಾರ ಮಾತೂ ಕೇಳಿಲ್ಲ, ರಷ್ಯಾ-ಉಕ್ರೇನ್ ಹೇಗೆ ಒಡೆಯಿತು ಸರ್ವ ನಾಶ ಮಾಡಿ ಬಿಟ್ರು, ಆದರೆ ನಮ್ಮ ಹೆಣ್ಣು ಮಕ್ಕಳಿಗೆ ಬೆಲೆ ಇಲ್ವಾ? ಆ ಉಗ್ರರನ್ನು ಹಿಡಿದುಕೊಂಡು ಬಂದು ನಮ್ಮ ಹೆಣ್ಣು ಮಕ್ಕಳ ಕೈಗೆ ಕೊಡಬೇಕಿತ್ತು ಎಂದಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top