ಕಡಬ: ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಶೈಕ್ಷಣಿಕ ಮಾರ್ಗದರ್ಶನ ಮತ್ತು ಮಾಹಿತಿ ಕಾರ್ಯಾಗಾರ ಇಂದು (ಮೇ 17) ಹೊಸಮಠ ಒಕ್ಕಲಿಗ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದೆ.
ಬೆಳಿಗ್ಗೆ 9.30 ರಿಂದ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಎಲ್ಲಾ ಸಮುದಾಯದ ಪ್ರಸ್ತುತ ಸಾಲಿನ ಪ್ರೌಢ ಶಿಕ್ಷಣದಲ್ಲಿ 9 ನೇ ತರಗತಿ, 10 ನೇ ತರಗತಿ ಮತ್ತು 10 ನೇ ತರಗತಿ ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಹಾಗೂ ದ್ವಿತೀಯ ಪಿ.ಯು.ಸಿ ಮತ್ತು ದ್ವಿತೀಯ ಪಿ.ಯು.ಸಿ ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಮುಂದಿನ ಶಿಕ್ಷಣ ಮತ್ತು ಉದ್ಯೋಗವಕಾಶಗಳು, ಉದ್ಯಮಶೀಲತೆ & ಕೌಶಲ್ಯಾಭಿವೃದ್ದಿ, ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಮತ್ತು ಅವಕಾಶಗಳ ಬಗ್ಗೆ ಶೈಕ್ಷಣಿಕ ಮಾರ್ಗದರ್ಶನ ಮತ್ತು ಮಾಹಿತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.