ಕನ್ನಡಿಗರನ್ನು ಅವಮಾನಿಸಿದ ಹೋಟೆಲ್‌ ಸೀಜ್‌, ಮ್ಯಾನೇಜರ್‌ ಬಂಧನ

ಡಿಸ್‌ಪ್ಲೇ ಬೋರ್ಡ್‌ನಲ್ಲಿ ಕನ್ನಡಿಗರನ್ನು ಅವಮಾನಿಸುವ ಸಂದೇಶ ಪ್ರಕಟ

ಬೆಂಗಳೂರು: ಡಿಸ್‌ಪ್ಲೇ ಬೋರ್ಡ್‌ನಲ್ಲಿ ಕನ್ನಡಿಗರಿಗೆ ಅವಮಾನವಾಗುವಂಥ ಹೇಳಿಕೆ ಪ್ರಕಟಿಸಿದ ಬೆಂಗಳೂರಿನ ಕೋರಮಂಗಲದ ಜಿ.ಎಸ್​.ಸೂಟ್​ ಹೋಟೆಲ್‌ನ ಮ್ಯಾನೇಜರ್ ಸರ್ಫಜ್​​ ಎಂಬಾತನನ್ನು ಬಂಧಿಸಲಾಗಿದ್ದು, ಜಿ.ಎಸ್​.ಸೂಟ್​ ಹೋಟೆಲ್​​ ಸೀಜ್ ಮಾಡಲಾಗಿದೆ. ಹೋಟೆಲ್​​ ಮಾಲೀಕ ಜಮ್ಸದ್ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ.

ನಗರದ ಕೋರಮಂಗಲದ ನೆಕ್ಸಸ್ ಮಾಲ್ ಸಮೀಪದಲ್ಲಿರುವ ಈ ಹೋಟೆಲ್‌ನಲ್ಲಿ ನಿನ್ನೆ ಕನ್ನಡಿಗರಿಗೆ ಅಪಮಾನ ಮಾಡಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ನಮ್ಮ‌ ನೆಲದ ಅನ್ನ ತಿಂದು ನಮ್ಮನ್ನೇ ಅವಮಾನಿಸುತ್ತಿದ್ದಾರೆ.‌ ಪದೇಪದೇ ಕನ್ನಡಿಗರನ್ನು ಕೆರಳಿಸುತ್ತಿದ್ದಾರೆ ಎಂದು ಕನ್ನಡ ಪರ ಸಂಘಟನೆಗಳು ಕೆರಳಿದ್ದವು. ಈ ಹೋಟೆಲ್​​ನ ಹೊರಭಾಗದ ಡಿಸ್​ಪ್ಲೇ ಬೋರ್ಡ್​ನಲ್ಲಿ ನಿನ್ನೆ ರಾತ್ರಿ ಅವಹೇಳನಕಾರಿ ಬರಹ ಪ್ರದರ್ಶಿಸಿದ್ದರು. ಅದನ್ನ ಗಮನಿಸಿದ ಸ್ಥಳೀಯರು ವಿಡಿಯೋ ಮಾಡಿದ್ದು, ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಮಾಡಿದ್ದಾರೆ. ಬಳಿಕ ವಿಡಿಯೋ ನೋಡಿ ಕನ್ನಡಿಗರು ಕೆರಳಿ ಕೆಂಡವಾಗಿದ್ದಾರೆ.



















































 
 

ತಕ್ಷಣ ಅಲರ್ಟ್ ಆದ ಮಡಿವಾಳ ಪೊಲೀಸರು ಹೋಟೆಲ್​ಗೆ ಬಂದು ಪರಿಶೀಲನೆ ಮಾಡಿದ್ದಾರೆ. ಹೋಟೆಲ್ ಸಿಬ್ಬಂದಿ ಅಬ್ದುಲ್ ‌ಸಮಾದ್ ಹಾಗೂ ಮ್ಯಾನೇಜರ್​ನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದರು. ಜೊತೆಗೆ ಡಿಸ್​ಪ್ಲೇ ಬೋರ್ಡ್ ವಶಕ್ಕೆ ಪಡೆದು, ಹೋಟೆಲ್ ಮೇಲೆ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ.‌
ಡಿಸ್​ಪ್ಲೇ ಬೋರ್ಡ್‌ನ ಕಂಟ್ರೋಲರನ್ನು ಯಾರೋ ಹ್ಯಾಕ್ ಮಾಡಿದ್ದಾರೆ ಎಂದು ಮಾಲೀಕರು ಹೇಳಿದ್ದಾರೆ. ಆದರೆ ಪೊಲೀಸರ ತನಿಖೆ ನಂತರವೇ ಅಸಲಿ ಸತ್ಯ ಹೊರಬರಬೇಕಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top