ಕನ್ನಡ ಸಾಹಿತ್ಯಕ್ಕೆ ಸಂದ ವಿಶ್ವ ಮನ್ನಣೆ
ಬೆಂಗಳೂರು: ಕನ್ನಡದ ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರ ಕಥಾಸಂಕಲನ ಹಾರ್ಟ್ ಲ್ಯಾಂಪ್ ಕೃತಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಸಿಕ್ಕಿದೆ. ಈ ಮೂಲಕ ಕನ್ನಡ ಸಾಹಿತ್ಯಕ್ಕೆ ವಿಶ್ವ ಮಟ್ಟದ ಪ್ರಶಸ್ತಿ ಗೌರವ ಲಭ್ಯವಾಗಿದೆ. ಬಾನು ಮುಷ್ತಾಕ್ ಅವರ ಹಾರ್ಟ್ ಲ್ಯಾಂಪ್ ಕಥಾಸಂಕಲನ ಇಂಗ್ಲಿಷ್‌ಗೆ ಅನುವಾದಗೊಂಡಿತ್ತು. ಹಸೀನಾ ಮತ್ತು ಇತರ ಕಥೆಗಳು ಕಥಾಸಂಕಲದಿಂದ ಆಯ್ದ ಕಥೆಗಳನ್ನು ಹಾರ್ಟ್ ಲ್ಯಾಂಪ್ ಒಳಗೊಂಡಿದೆ. ಈ ಕೃತಿಯನ್ನು ಕನ್ನಡದಿಂದ ಇಂಗ್ಲಿಷ್‌ಗೆ ಲೇಖಕಿ ದೀಪಾ ಬಸ್ತಿ ಅನುವಾದ ಮಾಡಿದ್ದರು.
ಇದೇ ಮೊದಲ ಬಾರಿಗೆ ಬೂಕರ್ ಕನ್ನಡ ಸಾಹಿತ್ಯ ಸ್ಪರ್ಧೆಗೆ ಅವಕಾಶ ಕಲ್ಪಿಸಿತ್ತು. ಮೊದಲ ಅವಕಾಶದಲ್ಲಿ ಕನ್ನಡ ಸಾಹಿತ್ಯ ಪ್ರಶಸ್ತಿ ಗೆದ್ದುಕೊಂಡಿದೆ. ಮಂಗಳವಾರ ರಾತ್ರಿ ಲಂಡನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಾರ್ಟ್‌ಲ್ಯಾಂಪ್ ಕೃತಿ ಆಯ್ಕೆ ಮಾಡಲಾಗಿತ್ತು. ಬೂಕರ್ ಪ್ರಶಸ್ತಿ 50 ಸಾವಿರ ಡಾಲರ್ ಬಹುಮಾನ ಮೊತ್ತವನ್ನು ಒಳಗೊಂಡಿದೆ.