ರಷ್ಯಾಕ್ಕೆ ತೆರಳಿರುವ ದಕ್ಷಿಣ ಕನ್ನಡ ಸಂಸದ ಕ್ಯಾ, ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಸಂಸದೆ ಕನಿಮೋಳ್ ನೇತೃತ್ವದ ಸರ್ವಪಕ್ಷಗಳ ನಿಯೋಗ | ಉನ್ನತ ಮಟ್ಟದ ಸಭೆ, ವೇದಿಕೆಗಳಲ್ಲಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದ ತಂಡ

ರಷ್ಯಾ: ಭಯೋತ್ಪಾದನೆ ಬೆಂಬಲಿಸುತ್ತಿರುವ ಪಾಕಿಸ್ತಾನದ ನಿಜ ಬಣ್ಣ ಬಯಲು ಮಾಡಲು ರಷ್ಯಾಕ್ಕೆ ತೆರಳಿರುವ ದಕ್ಷಿಣ ಕನ್ನಡ ಸಂಸದ ಕ್ಯಾ, ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಸಂಸದೆ ಕನಿಮೋಳ್ ನೇತೃತ್ವದ ಸರ್ವಪಕ್ಷಗಳ ನಿಯೋಗವು ಇಂದು ಹಲವು ಕಡೆ ಉನ್ನತ ಮಟ್ಟದ ಸಭೆ, ವೇದಿಕೆಗಳಲ್ಲಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದೆ.

ರಷ್ಯಾಕ್ಕೆ ಆಗಮಿಸಿದ ಐವರು ಸಂಸದರನ್ನು ಒಳಗೊಂಡ ಈ ನಿಯೋಗವನ್ನು ಅಲ್ಲಿನ ಭಾರತೀಯ ರಾಯಭಾರಿ ಅಧಿಕಾರಿಗಳು ಬರಮಾಡಿಕೊಂಡಿದ್ದರು, ನಂತರ ರಷ್ಯಾದಲ್ಲಿನ ಭಾರತದ ರಾಯಭಾರಿ ವಿನಯ್ ಕುಮಾರ್ ಅವರು ಸರ್ವಪಕ್ಷ ಸಂಸದೀಯ ನಿಯೋಗದ ಜತೆಗೆ ಭಾರತ-ರಷ್ಯಾ ಸಂಬಂಧಗಳ ವಿವಿಧ ಅಂಶಗಳ ಕುರಿತು ಸಮಗ್ರ ಮಾಹಿತಿ ಹಂಚಿಕೊಂಡರು.

ಇದಾದ ಬಳಿಕ ಸರ್ವಪಕ್ಷಗಳ ನಿಯೋಗವು ಮೊದಲು ರಷ್ಯಾದ ಫೆಡರೇಶನ್ ಕೌನ್ಸಿಲ್ನ ಅಂತಾರಾಷ್ಟ್ರೀಯ ವ್ಯವಹಾರಗಳ ಸಮಿತಿ ಉಪಾಧ್ಯಕ್ಷ ಆಂಡ್ರೆ ಡೆನಿಸೋನ್ ಮತ್ತು ಇತರ ಸೆನೆಟರ್ಗಳೊಂದಿಗೆ ಸಭೆ ನಡೆಸುವ ಮೂಲಕ ಭಯೋತ್ಪಾದನೆ ಹಾಗೂ ಪಾಕಿಸ್ತಾನ ಬೆಂಬಲಿತ ಭಯೋತ್ಪಾದನೆ ವಿರುದ್ಧದ ಭಾರತದ ದಿಟ್ಟ ಹೋರಾಟದ ಬಗ್ಗೆ ಮನವರಿಕೆ ಮಾಡಿಕೊಟ್ಟಿದೆ. ಜತೆಗೆ, ಪಹಲ್ಮಾಮ್‌ನಲ್ಲಿ ಉಗ್ರರು ನಡೆಸಿದ ಆ ಭೀಕರ ದಾಳಿ ಹಾಗೂ ಅದಕ್ಕೆ ಭಾರತವು ಪಾಕಿಸ್ತಾನಕ್ಕೆ ಯಾವ ರೀತಿ ತಿರುಗೇಟು ಕೊಟ್ಟು ಅಪರೇಷನ್ ಸಿಂದೂರ್ ಯಾಶಸ್ಸಿನ ಬಗ್ಗೆಯೂ ತಿಳಿಸಿದೆ. ಅಲ್ಲದೆ ಭಯೋತ್ಪಾದನೆ ವಿರುದ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೀಡಿರುವ ಗ್ರಹ ಸಂದೇಶ ಏನು ಎಂಬುದನ್ನು ಕೂಡ ವಿವರಿಸಿದೆ.



















































 
 

ಬಳಿಕ ಇಂದು ಮಧ್ಯಾಹ್ನ ಭಾರತದ ನಿಯೋಗವು ಸ್ಟೇಟ್ ಡುಮಾಕ್ಕೆ ಭೇಟಿ ನೀಡಿದ್ದು ಅಲ್ಲಿ ಅಂತಾರಾಷ್ಟ್ರೀಯ ವ್ಯವಹಾರಗಳಿಗೆ ಸಂಬಂಧಿಸಿದ ಸಮಿತಿಯ ಅಧ್ಯಕ್ಷ ಲಿಯೋನಿಡ್ ಸೈಟ್ಟಿ ಹಾಗೂ ಸದಸ್ಯರನ್ನು ಭೇಟಿ ಮಾಡಿ ಮಹತ್ವದ ಸಭೆ ನಡೆಸಿದ್ದಾರೆ. ಈ ಭೇಟಿಯ ನಂತರ ಸರ್ವಪಕ್ಷಗಳ ನಿಯೋಗವು ರಷ್ಯಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಉಪ ವಿದೇಶಾಂಗ ಸಚಿವ ಆಂಡ್ರಿ ರುಡೆನೆ ಅವರನ್ನು ಭೇಟಿ ಮಾಡಿ ಪಾಕಿಸ್ತಾನವು ಹಲವು ದಶಕಗಳಿಂದ ಯಾವ ರೀತಿ ಭಯೋತ್ಪಾದನೆಯನ್ನು ಸೃಷ್ಟಿಸಿ ಉಗ್ರರನ್ನು ಪೋಷಿಸುತ್ತಿದೆ ಎಂಬುದನ್ನು ಸವಿವರವಾಗಿ ಮನವರಿಕೆ ಮಾಡಿಕೊಟ್ಟಿದೆ. ಇದಾದ ಬಳಿಕ ಸಂಸದರ ನಿಯೋಗವು ರಷ್ಯನ್ ಇನ್‌ಸ್ಟಿಟ್ಯೂಟ್ ಆಫ್ ಸ್ಟ್ರಾಟೆಜಿಕ್ ಸ್ಟಡೀಸ್‌ನ ಮಿಬೈಲ್ ಫ್ರೆಡೋವ್ ಅವರನ್ನು ಭೇಟಿ ಮಾಡಿ ಭಯೋತ್ಪಾದನೆ ವಿರುದ್ಧ ಭಾರತದ ನಿಲುವುಗಳ ಬಗ್ಗೆ ವಿಚಾರ ವಿನಿಮಯ ಮಾಡಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top