ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ | ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ರಾಜ್ಯದಲ್ಲಿ ಮತ್ತೆ ಕೊರೊನಾ’ ಎಂಬ ಮಾತು ಕೇಳಿಬರುತ್ತಿದ್ದು, ಇದೀಗ ಜನರಲ್ಲಿ ಸಾಕಷ್ಟು ಆತಂಕ ಮೂಡಿದೆ. ಕೊರೊನಾದಿಂದ ಜಾಗೃತ ವಹಿಸಲು ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟ ಮಾಡಿದೆ. ಕಡ್ಡಾಯವಾಗಿ ಈ ನಿಯಮಗಳನ್ನು ವಾಲಿಸುವಂತೆ ಸೂಚನೆ ನೀಡಲಾಗಿದೆ.

ಕಳೆದ 20 ದಿನಗಳ ಅವಧಿಯಲ್ಲಿ ಕರ್ನಾಟಕದಲ್ಲಿ ಕೋವಿಡ್ – 19 ಪ್ರಕರಣಗಳು ಕೊಂಚ ಏರಿಕೆಯನ್ನು ಗಮನಿಸಲಾಗಿದ್ದು, 2025ನೇ ಸಾಲಿನಲ್ಲಿ ಇಲ್ಲಿಯವರೆಗೆ ಒಟ್ಟು 35 ಸಕ್ರಿಯ ಪ್ರಕರಣಗಳಿದ್ದು, ಅವುಗಳ ಪೈಕಿ 32 ಪ್ರಕರಣಗಳು ಬೆಂಗಳೂರು ನಗರದಲ್ಲಿ ವರದಿಯಾಗಿವೆ. 2025 ನೇ ಸಾಲಿನಲ್ಲಿ ರವರೆಗೆ ಯಾವುದೇ ಕೋವಿಡ್ ಮರಣಗಳು ವರದಿಯಾಗಿರುವುದಿಲ್ಲ. ಪ್ರಸ್ತುತ, ಕೋವಿಡ್-19 ಪರಿಸ್ಥಿತಿಯು ಹತೋಟಿಯಲ್ಲಿದ್ದು ಸಾರ್ವಜನಿಕರು ಅನಗತ್ಯ ಭಯಪಡುವ ಅಗತ್ಯವಿಲ್ಲ, ಆದರೆ ಎಚ್ಚರಿಕೆಯನ್ನು ವಹಿಸುವುದು ಅಗತ್ಯವಾಗಿದೆ.

ಆದಾಗ್ಯೂ, ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ರ‍್ಭಿಣಿಯರು, ಮಕ್ಕಳು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಮುಂಜಾಗ್ರತಾ ಕ್ರಮವಾಗಿ ಜನನಿಬಿಡ ಪ್ರದೇಶಗಳಿಗೆ ತೆರಳುವಾಗ ಮಾಸ್ಕ್ ಧರಿಸುವುದು ಸೂಕ್ತವಾಗಿದೆ. ಹಾಗೂ ಕೋವಿಡ್ ಮುಂಜಾಗ್ರತೆಗಾಗಿ ಸೂಕ್ತ ಕ್ರಮಗಳಾದ (Covid Appropriate Behaviour-CAB) ಕೈಗಳ ಸ್ವಚ್ಛತೆ, ಹ್ಯಾಂಡ್ ಸಾನಿಟೈನರ್ ನ ಬಳಕೆ ಇತ್ಯಾದಿಗಳನ್ನು ಪಾಲಿಸುವುದು ಅಗತ್ಯವಾಗಿದೆ.



















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top