ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶನಿವಾರ ರಾತ್ರಿ ಪತ್ತನಾಜೆ ಉತ್ಸವ ” ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಿತು.
ಉತ್ಸವದ ಬಳಿಕ ಭಕ್ತರಿಗೆ ಪ್ರಸಾದ ರೂಪದಲ್ಲಿ ಫಲವಸ್ತುಗಳನ್ನು ವಿತರಣೆ ಮಾಡಲಾಯಿತು.
ಉತ್ಸವದ ಅಂಗವಾಗಿ ಬೆಳಗ್ಗೆ ಮತ್ತು ಮಧ್ಯಾಹ್ನ ವಿಶೇಷ ಪೂಜೆ, ಸಂಜೆ ಶ್ರೀ ದೇವರ ನಿತ್ಯ ಬಲಿ ಉತ್ಸವು ಉಡಿಕೆ, ಚೆಂಡೆ, ವಾದ್ಯ ಸುತ್ತು, ಪಲ್ಲಕಿ ಉತ್ಸವ ಮತ್ತು ಸೇವೆಯ ಬಳಿಕ ವಸಂತ ಪೂಜೆ ¸ಸೇವೆ ಮಾಡಿಸಿದ ಭಕ್ತರಿಗೆ ಪ್ರಸಾದ ವಿತರಣೆ ನಡೆಯಿತು.
ದೇವರು ಗರ್ಭಗುಡಿ ಪ್ರವೇಶಿಸಿದ ಬಳಿಕ ಪತ್ತನಾಜೆ ಉತ್ಸವದ ಪ್ರಸಾದ ರೂಪವಾಗಿ ಫಲವಸ್ತುಗಳನ್ನು ದೇವಳದ ರಾಜಾಂಗಣದ ಭಕ್ತಾದಿಗಳಿಗೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರಾದ ಮಹಾಬಲ ರೈ ವಳತ್ತಡ್ಕ, ನಳಿನಿ ಪಿ.ಶೆಟ್ಟಿ, ಈಶ್ವರ ಬೆಡೇಕರ್, ದಿನೇಶ್ ಕುಲಾಲ್ ಪಿ.ವಿ.,ವಿನಯ ಸುವರ್ಣ, ಸುಭಾಶ್ ರೈ ಬೆಳ್ಳಿಪ್ಪಾಡಿ, ಕೃಷ್ಣವೇಣಿ ಮತ್ತು ಭಕ್ತರು ಉಪಸ್ಥಿತರಿದ್ದರು.