18 ಶಾಸಕರ ಅಮಾನತು ಎರಡೇ ತಿಂಗಳಿಗೆ ಮುಕ್ತಾಯ

ಅಮಾನತು ಆದೇಶ ಹಿಂಪಡೆದಿದ್ದೇನೆ ಎಂದ ಸ್ಪೀಕರ್‌ ಖಾದರ್‌

ಬೆಂಗಳೂರು: ಸದನದೊಳಗೆ ಅಶಿಸ್ತಿನ ವರ್ತನೆ ತೋರಿದ್ದಕ್ಕಾಗಿ ಅಮಾನತಗೊಂಡಿದ್ದ ಬಿಜೆಪಿಯ 18 ಶಾಸಕರ ಅಮಾನತು ಅವಧಿ ಎರಡೇ ತಿಂಗಳಿಗೆ ಮುಕ್ತಾಯವಾಗಿದೆ. ವಿಧಾನಸಭೆ ಸ್ಪೀಕರ್‌ ಯು.ಟಿ.ಖಾದರ್‌ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಸಭೆಯಲ್ಲಿ 18 ಶಾಸಕರ ಅಮಾನತು ಹಿಂಪಡೆಯಲು ತೀರ್ಮಾನಿಸಲಾಯಿತು. ಬಿಜೆಪಿಯ 18 ಶಾಸಕರ ಅಮಾನತು ಆದೇಶವನ್ನು ಹಿಂಪಡೆಯಲಾಗುವುದು ಎಂದು ವಿಧಾನಸಭೆ ಯು.ಟಿ ಖಾದರ್ ಸಭೆಯ ಬಳಿಕ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಸ್ಪೀಕರ್ ಕುರ್ಚಿಗೆ ಅಗೌರವ ತೋರಿಸಿದ ಮತ್ತು ಮಸೂದೆಯ ಪ್ರತಿಗಳನ್ನು ಹರಿದು ಅವರ ಮೇಲೆ ಎಸೆದ ಆರೋಪದ ಮೇಲೆ 18 ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಆರು ತಿಂಗಳ ಕಾಲ ಅಮಾನತುಗೊಳಿಸಲಾಗಿತ್ತು.



















































 
 

ಶಾಸಕರ ಅಮಾನತು ಆದೇಶವನ್ನ ಹಿಂಪಡೆಯಲಾಗಿದೆ. ಘಟನೆ ಬಗ್ಗೆ ಎಲ್ಲ ಶಾಸಕರು ವಿಷಾದ ವ್ಯಕ್ತಪಡಿಸಿದ್ದಾರೆ. ವಿಪಕ್ಷ ನಾಯಕರು ಕೂಡ ನನಗೆ ಮನವಿ ಸಲ್ಲಿಸಿದ್ದರು. ಇನ್ಮುಂದೆ ಹೀಗಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. 18 ಶಾಸಕರನ್ನು ಅಮಾನತು ಮಾಡಿ ಎರಡು ತಿಂಗಳಾಗಿದೆ. ಈಗ ಸಂತೋಷದಿಂದ ಶಾಸಕರ ಅಮಾಮತು ಹಿಂಪಡೆದಿದ್ದೇನೆ. ಯಾವುದೇ ಷರತ್ತು ಇಲ್ಲ, ಎಲ್ಲರೂ ನಮ್ಮ ಮಿತ್ರರು. ಆ ಸಮಯದಲ್ಲಿ ದುರ್ನಡತೆ ತೋರಿದ್ದಕ್ಕೆ ಕ್ರಮ ಕೈಗೊಂಡೆ. ಕ್ರಮ ತೆಗೆದುಕೊಳ್ಳುವುದಕ್ಕೆ ನನಗೆ ಅಧಿಕಾರವಿದೆ ಎಂದು ಯು.ಟಿ.ಖಾದರ್​ ಹೇಳಿದ್ದಾರೆ.

ಸ್ಪೀಕರ್ ಯು.ಟಿ.ಖಾದರ್ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಆರ್​.ಅಶೋಕ್, ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ, ಕಾನೂನು ಸಚಿವ ಎಚ್​.ಕೆ.ಪಾಟೀಲ್ ಭಾಗಿಯಾಗಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top