ಮಂಗಳೂರು: ಕರಾವಳಿಯಲ್ಲಿ ಭಾರಿ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಎರಡು ದಿನಗಳ ಕಾಲ ರಜೆ ಘೋಷಣೆ ಮಾಡಿ ಜಿಲ್ಲಾ ವಿಪತ್ತು ನಿರ್ವಹಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ ಬೆನ್ನಲ್ಲೇ ಮೇ 27 ಮತ್ತು 28 ರಂದು ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಾರ್ವಜನಿಕರು ನದಿ, ಸಮುದ್ರ ತೀರಗಳಿಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.
























