ಸಾಲದ ಹೊರೆಯಿಂದ ನೊಂದು ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ

ಕಾರಿನೊಳಗೆ ಕುಳಿತು ವಿಷ ಸೇವಿಸಿದ ಇಡೀ ಕುಟುಂಬ

ಹರ್ಯಾಣ: ಸಾಲ ಹೊರೆಯಿಂದ ನೊಂದು ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಹರ್ಯಾಣದ ಪಂಚಕುಲದಲ್ಲಿ ನಡೆದಿದೆ. ಡೆಹ್ರಾಡೂನ್​ನ ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ ಜೀವ ಬಿಟ್ಟಿದ್ದಾರೆ. ಸೆಕ್ಟರ್ 27ರಲ್ಲಿ ಮನೆಯ ಹೊರಗೆ ನಿಲ್ಲಿಸಿದ್ದ ಕಾರಿನೊಳಗೆ ಶವಗಳು ಇರುವುದು ಪತ್ತೆಯಾಗಿದೆ. ಕುಟುಂಬವು ಭಾರಿ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದರಿಂದ ಈ ನಿರ್ಧಾರಕ್ಕೆ ಬಂದಿರಬಹುದು ಎಂದು ಹೇಳಲಾಗಿದೆ.

ಡೆಹ್ರಾಡೂನ್‌ನ ನಿವಾಸಿ ಪ್ರವೀಣ್ ಮಿತ್ತಲ್ ಪಂಚಕುಲದ ಬಾಗೇಶ್ವರ ಧಾಮದಲ್ಲಿ ತಮ್ಮ ಕುಟುಂಬದೊಂದಿಗೆ ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದರು.ಕಾರ್ಯಕ್ರಮ ಮುಗಿಸಿಕೊಂಡು ಕುಟುಂಬ ಡೆಹ್ರಾಡೂನ್‌ಗೆ ಹಿಂತಿರುಗುತ್ತಿದ್ದಾಗ ಭಾನುವಾರ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಕುಟುಂಬವನ್ನು ಮೊದಲು ಸ್ಥಳೀಯರು ನೋಡಿದ್ದಾರೆ. ಕಾರಿನೊಳಗೆ ಅವರು ನರಳಾಡುತ್ತಿರುವುದನ್ನು ಕಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಗಿಲು ಒಡೆದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಕುಟುಂಬ ಸದಸ್ಯರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅವರೆಲ್ಲರೂ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದರು. ಮೃತರನ್ನು 42 ವರ್ಷದ ಪ್ರವೀಣ್ ಮಿತ್ತಲ್, ಅವರ ಪೋಷಕರು, ಪತ್ನಿ ಮತ್ತು ಮೂವರು ಮಕ್ಕಳು – ಇಬ್ಬರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗ ಎಂದು ಗುರುತಿಸಲಾಗಿದೆ.



















































 
 

ಆರಂಭಿಕ ತನಿಖೆಯಲ್ಲಿ ಇದು ಆತ್ಮಹತ್ಯೆ ಪ್ರಕರಣದಂತೆ ಕಂಡುಬಂದಿದೆ. ವಿಧಿವಿಜ್ಞಾನ ತಂಡವು ಸ್ಥಳಕ್ಕೆ ತಲುಪಿದೆ. ಅಪರಾಧ ಸ್ಥಳದಿಂದ ಎಲ್ಲಾ ಪುರಾವೆಗಳನ್ನು ಸಂಗ್ರಹಿಸಿ ತನಿಖೆ ನಡೆಸುತ್ತೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹಿಮಾದ್ರಿ ಕೌಶಿಕ್ ಹೇಳಿದ್ದಾರೆ. ಸ್ಥಳದಲ್ಲಿ ಆತ್ಮಹತ್ಯೆ ಪತ್ರ ಪತ್ತೆಯಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪಂಚಕುಲದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

1 thought on “ಸಾಲದ ಹೊರೆಯಿಂದ ನೊಂದು ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ”

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top