ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಲನಚಿತ್ರ ನಟ ಶ್ರೀಧರ್ ನಾಯಕ್ (47) ನಿನ್ನೆ ರಾತ್ರಿ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಧರ್ ನಾಯಕ್ ಅವರಿಗೆ ಇತ್ತೀಚೆಗೆ ಅನಾರೋಗ್ಯ ಉಲ್ಬಣಗೊಂಡಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು ಎಳೆದಿದ್ದಾರೆ. ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅವರ ಮೃತದೇಹ ಇಡಲಾಗಿದೆ.
ಗುರುತೇ ಸಿಗದಷ್ಟು ಬದಲಾಗಿ ಶ್ರೀಧರ್ ನಾಯಕ್ ಬೆಡ್ ಮೇಲೆ ಮಲಗಿದ್ದು ನೋಡಿ ಹಲವರಿಗೆ ಶಾಕ್ ಆಗಿತ್ತು. ಸಹಾಯ ಮಾಡುವಂತೆ ಅನೇಕರು ಕೋರಿಕೊಂಡಿದ್ದರು. ಶ್ರೀಧರ್ ಅವರಿಗೆ ಅನಾರೋಗ್ಯ ಉಂಟಾದ ವಿಚಾರದ ಬಗ್ಗೆ ಏಪ್ರಿಲ್ನಲ್ಲಿ ಸುದ್ದಿ ಬಹಿರಂಗವಾಯಿತು. ವಿಚಿತ್ರ ಸೋಂಕಿನಿಂದ ಅವರು ಈ ರೀತಿ ಆಗಿದ್ದರು. ಗುರುತು ಸಿಗದಷ್ಟು ಬದಲಾಗಿ ಅವರು ಆಸ್ಪತ್ರೆಯ ಬೆಡ್ ಮೇಲೆ ಮಲಗಿರೋದು ಕಂಡು ಬಂದಿತ್ತು. ಇದನ್ನು ನೋಡಿ ಅಭಿಮಾನಿಗಳಿಗೆ ನಿಜಕ್ಕೂ ಶಾಕ್ ಆಗಿತ್ತು. ಅವರು ಚೇತರಿಕೆ ಕಾಣಲಿ ಎಂದು ಪ್ರಾರ್ಥಿಸಿದ್ದರು.‘ಪಾರು’ ಮತ್ತು ‘ವಧು’ ಧಾರಾವಾಹಿಗಳಲ್ಲಿ ಅವರ ಪಾತ್ರಗಳು ಜನಪ್ರಿಯವಾಗಿದ್ದವು. ‘ಮ್ಯಾಕ್ಸ್’ ಚಿತ್ರದಲ್ಲೂ ಅವರು ನಟಿಸಿದ್ದರು. ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.