ಪುತ್ತೂರು : ದ.ಕ.ಜಿಲ್ಲಾ ಖೋ ಖೋ ಅಸೋಸಿಯೇಶನ್ ವತಿಯಿಂದ ಪುತ್ತೂರು ಅಲ್ಟಿಮೇಟ್ ಸ್ಪೋರ್ಟ್ಸ ಕ್ಲಬ್ ಹಾಗೂ ವಿವೇಕಾನಂದ ಕಾಲೇಜು ದೈಹಿಕ ಶಿಕ್ಷಣ ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಯೋಗದೊಂದಿಗೆ ದ.ಕ.ಜಿಲ್ಲಾ ಮಟ್ಟದ ಪುರುಷರ ಲೀಗ್ ಮಾದರಿಯ ಖೋ-ಖೋ ಚಾಂಪಿಯನ್ ಶಿಪ್ ಸೀಸನ್ 1-2023 ಅಲ್ಟಿಮೇಟ್ ಟ್ರೋಫಿ ಮಾ. 12 ಭಾನುವಾರ ಪುತ್ತೂರು ವಿವೇಕಾನಂದ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ.
ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಹಳೆನೇರೆಂಕಿ ದೈವ ನರ್ತಕ ೋಬಯ್ಯ ಪರವನ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿವೇಕಾನಂದ ಕಾಲೇಜು ಪ್ರಾಂಶುಪಾಲ ಪ್ರೊ.ವಿಷ್ಣುಗಣಪತಿ ಭಟ್, ಕೊಂಬೆಟ್ಟು ಸರಕಾರಿ ಪ್ರೌಢಶಾಲಾ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಜಗನ್ನಾಥ ರೈ, ನಿವೃತ್ತ ಯುವಜನ ಸೇವಾ ಕ್ರೀಡಾಧಿಕಾರಿ ಕೆ.ಮಾಧವ ಗೌಡ, ಕೊಂಬೆಟ್ಟು ಶಾಲಾ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ವಸಂತ ಕುಮಾರ್, ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜು ದೈಹಿಕ ಶಿ್ಕ್ಷಣ ನಿರ್ದೇಶಕ ಸೇಸಪ್ಪ ಗೌಡ, ವಿವೇಕಾನಂದ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ವಿ.ಎಸ್., ಯತೀಶ್ ಕುಮಾರ್ ಬಿ., ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ದಾಮೋದರ್, ವಿವೇಕಾನಂದ ಪದವಿಪೂರ್ವ ಕಾಲೇಜು ದೂಹಿಕ ಶಿಕ್ಷಣ ನಿರ್ದೇಶಕಿ ಡಾ.ಜ್ಯೋತಿ ಕುಮಾರಿ ಪಿ.ಸಿ., ಪಾಲ್ಗೊಳ್ಳಲಿದ್ದಾರೆ.
ಸಂಜೆ 5 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಸಂಜೀವ ಮಠಂದೂರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ವಿವೇಕಾನಂದ ಕಾಲೇಜು ಸಂಚಾಲಕ ಮುರಳೀಕೃಷ್ಣ ಕೆ. ಎನ್., ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ, ನ್ಯಾಯವಾದಿ ಚಿದಾನಂದ ಬೈಲಾಡಿ, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಅಕ್ಷಯ ಗ್ರೂಪ್ ಅಧ್ಯಕ್ಷ ಜಯಂತ ನಡುಬೈಲು, ಸಿವಿಲ್ ಇಂಜಿನಿಯರ್ ಎ.ವಿ.ನಾರಾಯಣ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡ, ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿ ಆಶಾ ಬೆಳ್ಳಾರೆ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ಖೋ-ಖೋ ಆಟಗಾರ್ತಿ, ಕ್ರೀಢಾರತ್ನ ಪುರಸ್ಕೃತೆ ಕು.ದೀಕ್ಷಾ ಕೆ. ಹಾಗೂ ಖೋ-ಖೋ ಕ್ರೀಢಾ ಪೋಷಕ, ನಿವೃತ್ತ ಉದ್ಯೋಗಿ ಬಿ.ಕೆ.ಪೂವಪ್ಪ ಅವರನ್ನು ಸನ್ಮಾನಿಸಲಾಗುವುದು. ಅಲ್ಲದೆ ಪುತ್ತೂರಿನಲ್ಲಿ ಖೋ-ಖೋ ಕ್ರೀಡೆಯನ್ನು ಬೆಳಗಿಸಿದ ಶಿಕ್ಷಕರಿಗೆ ಸನ್ಮಾನ ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.