ಕಡಬ: ಕೊಯಿಲ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ರಾಮಕುಂಜ ಗ್ರಾಮದ ಆತೂರು ಎಂಬಲ್ಲಿ ಬೃಹತ್ ಗಾತ್ರದ ಮಾವಿನ ಮರವೊಂದು ಕಾರಿನ ಮೇಲೆ ಬಿದ್ದ ಘಟನೆ ಇಂದು ನಡೆದಿದೆ.
ರಸ್ತೆ ಬದಿಯಲ್ಲಿ ನಿಂತಿದ್ದ ಮಾರುತಿ-800 ಕಾರಿನ ಮೇಲೆ ಬಿದ್ದಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ.
ಕಾರಿನಲ್ಲಿ ಮೂರು ಮಂದಿ ಇದ್ದು, ಅಪಾಯದ ಅರಿವು ಆಗುತ್ತಿದ್ದಂತೆ ಕಾರಿನಿಂದ ಇಳಿದು ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
























