ಬಂಟ್ವಾಳ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಬಿ.ಸಿ.ರೋಡಿನಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಮಂಚಿ ಭಂಡಾರಕೊಟ್ಟಿಗೆ ನಿವಾಸಿ ಜಯಂತ್ ಗೌಡ ಮೃತಪಟ್ಟ ಚಾಲಕ.
ತುಂಬೆಯ ಖಾಸಗಿ ಆಸ್ಪತ್ರೆಯ ಕ್ಯಾಂಟೀನ್ ಸಿಬ್ಬಂದಿಯಾಗಿದ್ದ ಜಯಂತ್ ಗೌಡ ಕಾರಿನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡು ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ವಿದ್ಯುತ್ ಕಂಬಕ್ಕೂ ಹಾನಿಯಾಗಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.