ಬಿಜೆಪಿ ಹೈಕಮಾಂಡ್ ಹಾಲಿ ಶಾಸಕರಾದ ಎಸ್.ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಅವರನ್ನ ಪಕ್ಷದಿಂದ ಉಚ್ಚಾಟನೆ ಮಾಡಿದ್ದು, ಈ ಮೂಲಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.
ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಶಾಸಕರಾದ ಎಸ್.ಟಿ. ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು ತಕ್ಷಣದಿಂದಲೇ ಜಾರಿಯಾಗುವಂತೆ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ ನೀಡಿದೆ.
ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬಿಜೆಪಿ ಶಿಸ್ತು ಸಮಿತಿ ಇಬ್ಬರು ಶಾಸಕರಿಗೆ ನೋಟಿಸ್ ನೀಡಿತ್ತು. ಆ ನೋಟಿಸ್‌ಗೆ ಮೇ 25ರ ಒಳಗೆ ಉತ್ತರಿಸುವಂತೆ ಸೂಚನೆ ನೀಡಿತ್ತು. ನೋಟಿಸ್‌ಗೆ ಉತ್ತರಿಸುವ ಗಡುವು ಮುಕ್ತಾಯವಾದ ಹಿನ್ನೆಲೆಯಲ್ಲಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿದೆ.
ಯಶವಂತಪುರ ಶಾಸಕರಾದ ಎಸ್.ಟಿ ಸೋಮಶೇಖರ್ ಹಾಗೂ ಯಲ್ಲಾಪುರ ಶಾಸಕರಾದ ಶಿವರಾಮ್ ಹೆಬ್ಬಾರ್ ಅವರ ಮೇಲೆ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ಆರೋಪ ಕೇಳಿ ಬಂದಿತ್ತು. ಪದೇ ಪದೇ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಇಂದಿನಿಂದ ಶಾಸಕರಾದ ಎಸ್.ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರು ಬಿಜೆಪಿ ಪಕ್ಷದ ಸದಸ್ಯತ್ವದಿಂದ ಅಮಾನತುಗೊಂಡಿದ್ದಾರೆ
94j3wd