ಬಂಟ್ವಾಳ: ಪಿಕಪ್ ಚಾಲಕರೊಬ್ಬರನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಇಂದು ನಡೆದಿದೆ.
ಕೊಳತ್ತಮಜಲು ನಿವಾಸಿ ರಹೀಮ್ ಎಂಬಾತ ಹತ್ಯೆಗೀಡಾದವರು.
ರಹೀಮ್ ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಡಿದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ರಹೀಮ್ ಜೊತೆ ಇನ್ನೊರ್ವ ಸ್ಥಳದಲ್ಲಿದ್ದು, ಆತನಿಗೂ ಕಡಿಯಲಾಗಿದೆ. ಆತನಿಗೆ ಕೈಗೆ ಗಾಯ ವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
psrf58