ದರೋಡೆಗೆ ಸಂಚು ನಡೆಸುತ್ತಿದ್ದ ಇಬ್ಬರು ದುಷ್ಕರ್ಮಿಗಳು ಸೆರೆ

ಮೂಡುಬಿದಿರೆ: ಬಡಗ ಮಿಜಾರು ಗ್ರಾಮದ ಬೊಳ್ಳಚ್ಛಾರ್ ಎಂಬಲ್ಲಿ, ದರೋಡೆ ಕೃತ್ಯವೆಸಗಲು ಸಂಚು ರೂಪಿಸುತ್ತಿದ್ದ ದುಷ್ಕರ್ಮಿಗಳನ್ನು ಬಂಧಿಸಿ, ಅವರ ಜಾಲವನ್ನು ಭೇದಿಸುವಲ್ಲಿ ಮೂಡುಬಿದಿರೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಗುರುವಾರ ರಾತ್ರಿ ಸುಮಾರು 10.30 ಗಂಟೆಗೆ. ಖಚಿತ ಮಾಹಿತಿ ಮೇರೆಗೆ ಕಾರ್ಯಪ್ರವೃತ್ತರಾದ ಪಿಎಸ್‌ಐ ಪ್ರತಿಭಾ ಮತ್ತು ಅವರ ಸಿಬ್ಬಂದಿ. ಇನ್ನೋವಾ ಕಾರಿನಲ್ಲಿದ್ದ ಐವರು ಶಂಕಿತರನ್ನು ಸುತ್ತುವರಿದು ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ, ಮಾರ್ಪಾಡಿ ಗ್ರಾಮದ ಜಗದೀಶ್ (29) ಮತ್ತು ಹೊಸಂಗಡಿ ಗ್ರಾಮದ ಪ್ರಶಾಂತ್ ಅಲಿಯಾಸ್ ಪಾಂತು (27) ಎಂಬ ಇಬ್ಬರನ್ನು ಬಂಧಿಸಲಾಗಿದೆ. ಕಾರಿನಲ್ಲಿದ್ದ ಇತರೆ ಮೂವರು ಕತ್ತಲೆಯಲ್ಲಿ ಪರಾರಿಯಾಗಿದ್ದಾರೆ.

ಬಂಧಿತರನ್ನು ವಿಚಾರಣೆಗೊಳಪಡಿಸಿದಾಗ ಅವರು ದರೋಡೆಗೆ ಸಂಚು ರೂಪಿಸುತ್ತಿದ್ದುದಾಗಿ ಒಪ್ಪಿಕೊಂಡಿದ್ದಾರೆ. ಅವರ ವಾಹನದಿಂದ ಮಾರಕಾಸ್ತ್ರವಾದ ತಲವಾರು ಮತ್ತು ಖಾರದ ಪುಡಿಯ ಪ್ಯಾಕೆಟ್‌ನ್ನು ವಶಪಡಿಸಿಕೊಳ್ಳಲಾಗಿದೆ.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top