15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಇಬ್ಬರು ಆರೋಪಿಗಳು ಸೆರೆ

ಬೆಳಗಾವಿಯಲ್ಲಿ ಒಂದೇ ವಾರದಲ್ಲಿ ಸಂಭವಿಸಿದ ಎರಡನೇ ಪ್ರಕರಣ

ಬೆಳಗಾವಿ : ಬೆಳಗಾವಿಯಲ್ಲಿ ಇನ್ನೊಂದು ಗ್ಯಾಂಗ್‌ರೇಪ್‌ ಪ್ರಕರಣ ಸಂಭವಿಸಿದೆ. ಹದಿನೈದು ವರ್ಷದ ಬಾಲಕಿ ಮೇಲೆ 6 ಜನ ಎರಡೆರಡು ಬಾರಿ ಸಾಮೂಹಿಕ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ನಗರದ ಹೊರವಲಯದ ಕಾಕತಿ ಪೊಲೀಸ್‌ ಠಾಣೆ ವ್ಯಾಪ್ತಿಯ ಗುಡ್ಡದಲ್ಲಿ ನಡೆದಿದೆ.
ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಎಫ್‌ಐಆರ್​ ದಾಖಲಾದ ಬಳಿಕ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಸಹಿತ ಉಳಿದ ನಾಲ್ವರು ತಪ್ಪಿಸಿಕೊಂಡಿದ್ದಾರೆ.

ಆರು ತಿಂಗಳ ಹಿಂದೆ ಸ್ನೇಹಿತ ಬಾಲಕಿಯನ್ನು ಪುಸಲಾಯಿಸಿ ಗುಡ್ಡಕ್ಕೆ ಕರೆದೊಯ್ದಿದ್ದು, ಅಲ್ಲಿ 6 ಮಂದಿ ಅತ್ಯಾಚಾರ ಎಸಗಿ ವಿಡಿಯೋ ಮಾಡಿದ್ದರು. ಬಳಿಕ ಆ ವಿಡಿಯೋ ಇಟ್ಟುಕೊಂಡು ಬ್ಲಾಕ್‌ಮೇಲ್‌ ಮಾಡಿ ಮತ್ತೊಮ್ಮೆ ಅತ್ಯಾಚಾರ ಮಾಡಿದ್ದಾರೆ. ಈ ವೇಳೆ ಕೂಡ ವಿಡಿಯೋ ಮಾಡಿಕೊಂಡಿದ್ದಾರೆ. ಈ ವಿಡಿಯೋಗಳನ್ನು ಇಟ್ಟುಕೊಂಡು ಬಾಲಕಿಗೆ ಬೆದರಿಕೆ ಹಾಕಿದಾಗ ಎಪಿಎಂಸಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.





















































 
 

ಬೆಳಗಾವಿಯಲ್ಲಿ ಒಂದು ವಾರದಲ್ಲಿ ನಡೆದಿರುವ ಎರಡನೇ ಗ್ಯಾಂಗ್‌ರೇಪ್‌ ಪ್ರಕರಣವಿದು. ವಾರದ ಹಿಂದೆ ಬೆಳಗಾವಿಯ ಹೊರವಲಯದ ರೆಸಾರ್ಟ್​​ನಲ್ಲಿ ಗ್ಯಾಂಗ್​​ರೇಪ್​ ನಡೆದಿತ್ತು. ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಪುತ್ರ ಸಹಿತ ಭಾಗಿಯಾಗಿದ್ದಾನೆ ಎಂಬ ಆರೋಪ ಕೂಡ ಕೇಳಿಬಂದಿತ್ತು. ಕಾಲೇಜಿಗೆ ರಜೆ ಇದ್ದ ಕಾರಣ ಮೂವರು ವಿದ್ಯಾರ್ಥಿಗಳು ರೆಸಾರ್ಟ್ ಒಂದರಲ್ಲಿ ಪಾರ್ಟಿ ಮಾಡಿದ್ದಾರೆ. ಪಾರ್ಟಿಯ ಮತ್ತಿನಲ್ಲಿ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆಯಿಸಿಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು.

ಈ ವಿಚಾರ ಯಾರಿಗೂ ಗೊತ್ತಿರಲಿಲ್ಲ. ಆದರೆ ಬಾಲಕಿಯ ಕೊರಳಲ್ಲಿ ಇದ್ದ ಸರ ಮಿಸ್ ಆಗಿತ್ತು. ಈ ಬಗ್ಗೆ ಮನೆಯಲ್ಲಿ ಪೋಷಕರು ಆಕೆಯನ್ನು ವಿಚಾರಿಸಿದ್ದಾರೆ. ಈ ವೇಳೆ ಓರ್ವ ಸ್ನೇಹಿತನ ಬಳಿ ಚೈನ್ ಇದೆ ಅಂತಾ ಹೇಳಿದ್ದಾಳೆ. ಆತನ ಬಳಿ ಯಾಕೆ ಕೊಟ್ಟೆ ಅಂತಾ ಕೇಳಿದಾಗ ತನ್ನ ಸ್ನೇಹಿತರು ಎಸಗಿದ ದೌರ್ಜನ್ಯದ ಬಗ್ಗೆ ಬಾಲಕಿ ಪೋಷಕರ ಬಳಿ ಬಾಯಿ ಬಿಟ್ಟಿದ್ದಾಳೆ.

ತಕ್ಷಣವೇ ಬಾಲಕಿ ತಾಯಿ ಟಿಳಕವಾಡಿ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದರು. ಬಾಲಕಿ ಮಾರ್ಕೆಟ್ ಠಾಣೆ ವ್ಯಾಪ್ತಿಯಿಂದ ಸ್ನೇಹಿತರೊಂದಿಗೆ ರೆಸಾರ್ಟ್​ಗೆ ಹೋಗಿದ್ದರಿಂದ ಪ್ರಕರಣವನ್ನ ಮಾರ್ಕೆಟ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಮಾರ್ಕೆಟ್ ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಿಸಿಕೊಂಡು ತನಿಖೆ ಕೈಗೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಅಪ್ರಾಪ್ತರು ರೂಮ್ ಮಾಡಲು ಸಹಾಯ ಮಾಡಿದ್ದ ಸಾಕೀಬ್ ನಿಜಾಮಿ ಹಾಗೂ ಓರ್ವ ಬಾಲಕನನ್ನು ಸಹ ಪೊಲೀಸರು ಬಂಧಿಸಿದ್ದರು. ಆರೋಪಿಗಳ ವಿಚಾರಣೆ ವೇಳೆ ತಮ್ಮೊಟ್ಟಿಗೆ ಪೊಲೀಸ್ ಅಧಿಕಾರಿ ಮಗ ಕೂಡ ಇದ್ದ ಎಂದು ಬಾಯಿಬಿಟ್ಟಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top