ವಿರಾಟ್‌ ಕೊಹ್ಲಿ ಪಬ್‌ ಮೇಲೆ ಇನ್ನೊಂದು ಕೇಸ್‌

ಕಾನೂನು ಉಲ್ಲಂಘಿಸಿ ಕಾರ್ಯಾಚರಿಸುತ್ತಿರುವ ಪಬ್‌

ಬೆಂಗಳೂರು: ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನಲ್ಲಿರುವ ಪಬ್ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.
ಪ್ರತ್ಯೇಕ ಸ್ಥಳ ಮೀಸಲಿಡದೆ ಧೂಮಪಾನಕ್ಕೆ ಅವಕಾಶ ನೀಡಿದ್ದಕ್ಕಾಗಿ ಬೆಂಗಳೂರಿನ ಕಸ್ತೂರ್‌ಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ್ ಬಾರ್ & ರೆಸ್ಟೋರೆಂಟ್‌ನ ಮ್ಯಾನೇಜರ್ ಹಾಗೂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ಮೇ 29ರಂದು ಕಬ್ಬನ್ ಪಾರ್ಕ್ ಪೊಲೀಸರು ಬಾರ್ ಮೇಲೆ ದಾಳಿ ಮಾಡಿ, ಸ್ವಯಂಪ್ರೇರಿತವಾಗಿ ಎನ್‌ಸಿಆರ್ ದಾಖಲಿಸಿಕೊಂಡಿದ್ದರು. ಇದೀಗ ನ್ಯಾಯಾಲಯದ ಅನುಮತಿ ಪಡೆದು, ಕೊಟ್ಪಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

















































 
 

ಇದಕ್ಕೂ ಮುನ್ನ ಕಳೆದ ಜುಲೈನಲ್ಲಿ ಇದೇ ಬಾರ್ ಮೇಲೆ ಅವಧಿ ಮೀರಿ ಪಬ್ ನಡೆಸುತ್ತಿದ್ದರು ಎಂದು ದೂರು ದಾಖಲಾಗಿತ್ತು. 2024ರ ಜು.6ರಂದು ರಾತ್ರಿ 1.20ರವರೆಗೆ ಪಬ್ ತೆರೆದಿತ್ತು. ರಾತ್ರಿ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಪಬ್ ಓಪನ್ ಇರುವುದಾಗಿ ಮಾಹಿತಿ ಇತ್ತು. ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಅವಧಿ ಮುಗಿದಿದ್ದರೂ ಗ್ರಾಹಕರು ಇದ್ದರು. ಹೀಗಾಗಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top