ಕಡಬ: (ಜೂ. 1); ಶಾಲಾ ಅಭಿವೃದ್ಧಿಯನ್ನು ಶಾಲಾ ಹಳೆ ವಿದ್ಯಾರ್ಥಿಗಳ ಸಹಕಾರದಿಂದ ಮಾಡಬೇಕು ಎಂದು ಶಾಲಾಭಿವೃದ್ಧಿ ಅಧ್ಯಕ್ಷ ವಿಶ್ವಾನಾಥ ಪುತ್ಯೆ ಹೇಳಿದರು.

ಅವರು ಕೊಯಿಲ ಕೆಸಿ ಫ್ರಾಮ್ ಸರಕಾರಿ ಶಾಲೆಯಲ್ಲಿ ಎಲ್ ಕೆಜಿ ಪ್ರಾರಂಭ ಉತ್ಸವದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ Lkg, ukg ಪ್ರಾರಂಭದ ಕುರಿತಾಗಿ ಮುಖ್ಯ ಶಿಕ್ಷಕಿ ಸುಜಾತ ಎಂ. ಮಾಹಿತಿ ನೀಡಿದರು.
ಕಾರ್ಯಕ್ರಮವನ್ನು ಶಿಕ್ಷಕಿ ಅನುಪಮಾ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕ ಲಂಕೇಶ್ ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ ಎಂಬ ಧ್ಯೇಯ ವಾಕ್ಯವನ್ನು ವಿದ್ಯಾರ್ಥಿಗಳಿಗೆ ಹೇಳುತ್ತಾ ವಂದನಾರ್ಪಣೆ ಮಾಡಿದರು.
























