ಪುತ್ತೂರು: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ. ಮೆಲ್ಕಾರ್ ಬಂಟ್ವಾಳ ಇದರ ಪುತ್ತೂರು ಘಟಕದ ಸಭೆ ಪುತ್ತೂರಿನ ಸ್ವಾಗತ ಹೋಟೆಲ್ ನಲ್ಲಿ ಜರಗಿತು.
ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಚಂದ್ರಶೇಖರ ಆಳ್ವ ವಹಿಸಿದ್ದರು. ಪ್ರತಿಷ್ಠಾನದ ಕೇಂದ್ರ ಸಮಿತಿಯ ಸಂಚಾಲಕ ಭಾಸ್ಕರ ಬಾರ್ಯ, ಉಪಾಧ್ಯಕ್ಷ ಲೋಕೇಶ್ ಹೆಗ್ಡೆ ಪುತ್ತೂರು, ಮಹಿಳಾ ಘಟಕದ ಸಂಚಾಲಕಿ ವತ್ಸಲಾ ರಾಜ್ನಿ ಕೇಂದ್ರ ಸಮಿತಿಯ ಚಟುವಟಿಕೆಗಳ ಮಾಹಿತಿ ನೀಡಿದರು.
ಪುತ್ತೂರು ಘಟಕದ ವತಿಯಿಂದ ಮಹಾಲಿಂಗೇಶ್ವರ ದೇವಸ್ಥಾನದ ಗ್ರಂಥಾಲಯಕ್ಕೆ ಪುಸ್ತಕಗಳನ್ನು ನೀಡುವುದು ಮತ್ತು ಘಟಕದ ಸದಸ್ಯರಿಗೆ ಒಂದು ದಿನದ ಕ್ಷೇತ್ರ ದರ್ಶನ ಪ್ರವಾಸವಿರಿಸಿಕೊಳ್ಳುವುದಾಗಿ ತೀರ್ಮಾನಿಸಲಾಯಿತು.
ಭವಾನಿ ಶಂಕರ ಶೆಟ್ಟಿ ಪುತ್ತೂರು, ಮಹಾಬಲ ರೈ ಒಳತಡ್ಕ, ಗುಂಡ್ಯಡ್ಕ ಈಶ್ವರ ಭಟ್, ಶಂಕರಿ ಶರ್ಮ, ಪದ್ಮನಾಭ ನಾಯಕ್, ಶಂಕರ್ ನಾಯಕ್, ಬಾಲಕೃಷ್ಣರಾವ್ ಎ, ವೇದವ್ಯಾಸ ರಾಮಕುಂಜ, ಟಿ.ಪ್ರೇಮಲತಾ ರಾವ್ ಸಭೆಯಲ್ಲಿ ಭಾಗವಹಿಸಿದ್ದರು.
























