ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‍ ಪಲ್ಟಿ | ಹಲವರಿಗೆ ಗಾಯ

ಗುಂಡ್ಯ: ಖಾಸಗಿ ಬಸ್ ಪಲ್ಟಿಯಾಗಿ ಹಲವಾರು ಪ್ರಯಾಣಿಕರು ಗಾಯಗೊಂಡು ಹಲವರು ಗಾಯಗೊಂಡ ಘಟನೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ಇಂದು ಮುಂಜಾನೆ ನಡೆದಿದೆ.

ಬೆಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಖಾಸಗಿ ಬಸ್ ಸುಮಾರು 3:30 ರ ವೇಳೆ ಗುಂಡ್ಯ ಸಮೀಪ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮೂವರು ತೀವ್ರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಗಾಯಗೊಂಡವರನ್ನು ಫಹದ್ (20) ಮೂಡಬಿದ್ರೆ, ರಂಝೀನ್(25) ಪರಂಗಿಪೇಟೆ, ಉಮ್ಮರ್ (53)ದೇರಳಕಟ್ಟೆ, ತಮೀನ್(19) ಪುತ್ತೂರು, ಇಷಾಮ್(19) ಸಾಲ್ಮರ ಪುತ್ತೂರು, ರುಕ್ಮಯ(24) ಉಪ್ಪಿನಂಗಡಿ, ಜಾಹಿರ್ (23) ಸಾಲೆತ್ತೂರು ಬಂಟ್ವಾಳ, ಶಮೀರ್ (28) ವಿಟ್ಲ, ಆನ್ಸರ್ (26) ವಿಟ್ಲ, ಸೋಮಶೇಖರ (55) ದಾಸರಪುರ ಬೆಂಗಳೂರು, ಶರತ್(35) ದಾಸರಪುರ ಬೆಂಗಳೂರು, ಡಾ. ಮಹಂತ್ ಗೌಡ (47) ನೆಲಮಂಗಲ ಬೆಂಗಳೂರು, ಸಿಮಾಕ್ (23), ಅಬ್ದುಲ್ ರಜೀದ್ (38) ಸಂಪ್ಯ ಪುತ್ತೂರು, ಪೌಝಿಲ್ (23), ಕೈಕಂಬ ಮೂಡುಬಿದ್ರೆ, ಅಲ್ತಾಫ್(28) ಎಂದು ಗುರುತಿಸಲಾಗಿದೆ. ಗಾಯಗೊಂಡ ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top