ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ನಿಧನ

ಬೆಳ್ತಂಗಡಿ: ತೆಂಕುತಿಟ್ಟಿನ ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67 ) ಜೂ.7ರಂದು ಮಂಗಳೂರಿನ ಕಾವೂರು ಸಮೀಪದ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.

ಕಟೀಲು ಮೇಳದಲ್ಲಿ ಕಳೆದ 20 ವರ್ಷಗಳಿಂದ ವೇಷಧಾರಿಯಾಗಿ, 3ನೇ ಮೇಳದ ಪ್ರಬಂಧಕರಾಗಿ ಸೇವೆ ಸಲ್ಲಿಸಿದ್ದರು. ಧರ್ಮಸ್ಥಳ, ಕರ್ನಾಟಕ, ಸಸಿಹಿತ್ಲು ಮೇಳಗಳಲ್ಲಿ ತುಳು – ಕನ್ನಡ ಪ್ರಸಂಗ ಗಳಲ್ಲಿ ಎಲ್ಲಾ ಸ್ವರೂಪದ ಪಾತ್ರ ಗಳನ್ನು ನಿರ್ವಹಿಸಿದ್ದರು. ಪುಂಡು ವೇಷ, ರಾಜ ವೇಷ, ನಾಟಕೀಯ ಪಾತ್ರಗಳ ನುರಿತ ಕಲಾವಿದರಾಗಿದ್ದರು.

ಮೃತರು ಪತ್ನಿ ,ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ಧಾರೆ.

















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top