ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್ ಇ ಸಂಸ್ಥೆಯ ವಿದ್ಯಾರ್ಥಿಗಳು 2024-25 ನೇ ಸಾಲಿನ ಡಿಸೆಂಬರ್ ತಿಂಗಳಿನಲ್ಲಿ ಸಿಲ್ವರ್ ಝೋನ್ ಫೌಂಡೇಶನ್ ನಡೆಸಿರುವ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿದ್ದಾರೆ.
ಪರೀಕ್ಷೆ ಬರೆದಿದ್ದ 512 ಮಂದಿ ವಿದ್ಯಾರ್ಥಿಗಳಲ್ಲಿ 5ನೇ ತರಗತಿಯ ಸಂಹಿತ್ ಜೋಸ್ಸಿ ಲೋಬೋ, 2 ನೇ ತರಗತಿಯ ಚಿರಾಗ್ ಎಸ್ ಪಟ್ಟೆ, 1ನೇ ತರಗತಿಯ ಹರ್ಷಿಲ್ ಬಂಗೇರ ಎನ್ ಇಂಗ್ಲೀಷ್ ವಿಷಯದಲ್ಲಿ ಹಾಗೂ 2 ನೇ ತರಗತಿಯ ಶಾರ್ವಿ ಕೆ.ಎಚ್. ವಿಜ್ಞಾನ ವಿಷಯದಲ್ಲಿ ದ್ವಿತೀಯ ಹಂತದ ಪರೀಕ್ಷೆಗೆ ಆಯ್ಕೆಯಾಗಿದ್ದರು. ಈ ಪರೀಕ್ಷೆಯಲ್ಲಿ ಚಿರಾಗ್ ಎಸ್ ಪಟ್ಟೆ ಬೆಳ್ಳಿ ಪದಕ ವಿಜೇತರಾಗಿದ್ದಾರೆ.
ಪ್ರಥಮ ಹಂತದ ಪರೀಕ್ಷೆಯಲ್ಲಿ 90 ವಿದ್ಯಾರ್ಥಿಗಳು ಚಿನ್ನದ ಪದಕ ಮತ್ತು ಪ್ರಶಸ್ತಿ ಪತ್ರ, 54 ವಿದ್ಯಾರ್ಥಿಗಳು ಬೆಳ್ಳಿಯ ಪದಕ ಮತ್ತು ಪ್ರಶಸ್ತಿ ಪತ್ರ, 27 ವಿದ್ಯಾರ್ಥಿಗಳು ಕಂಚಿನ ಪದಕ ಮತ್ತು ಪ್ರಶಸ್ತಿ ಪತ್ರಕ್ಕೆ ಭಾಜನರಾದರೆ, ಉಳಿದಂತೆ ಎಲ್ಲಾ ಪರೀಕ್ಷೆ ಬರೆದ ವಿದ್ಯಾರ್ಥಿಗಳು ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪ್ರಶಸ್ತಿ ಪತ್ರ ಪಡೆದುಕೊಂಡಿರುತ್ತಾರೆ. ಪದಕ ಮತ್ತು ಪ್ರಶಸ್ತಿ ಪತ್ರ ಗಳಿಸಿರುವ ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.
























