ಮೈಕ್ನಲ್ಲಿ ಕೂಗಿದರೆ ಮಾತ್ರ ದೇವರಿಗೆ ಕಿವಿ ಕೇಳುವುದಾ ಎಂದು ಆಕ್ರೋಶ
ಮಂಗಳೂರು : ಕಾವೂರಿನಲ್ಲಿ ಭಾನುವಾರ ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಗವಹಿಸಿದ ಉರಿ ನಾಲಗೆಯ ಭಾಷಣಕಾರ ಕೆ. ಎಸ್. ಈಶ್ವರಪ್ಪ ಕಿರಿಕಿರಿಯಾಗುವ ಪ್ರಸಂಗವಂದನ್ನು ಎದುರಿಸಬೇಕಾಯಿತು. ಈಶ್ವರಪ್ಪ ಭಾಷಣ ಮಾಡುತ್ತಿರುವಾಗಲೇ ಪಕ್ಕದಲ್ಲಿದ್ದ ಮಸೀದಿಯಿಂದ ಆಝಾನ್ ಶುರುವಾಯಿತು. ಇದರಿಂದ ಈಶ್ವರಪ್ಪ ಬಹಳ ಸಿಡಿಮಿಡಿಗೊಂಡು, ನನಗೆ ಎಲ್ಲಿ ಹೋದರೂ ಇದೊಂದು ತಲೆನೋವು. ಮೈಕ್ನಲ್ಲಿ ಕೂಗಿದರೆ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ ಎಂದು ಪ್ರಶ್ನಿಸಿದರು.
ಸುಪ್ರೀಂ ಕೋರ್ಟ್ ಆದೇಶವಿದ್ದು, ಇಂದಲ್ಲ ನಾಳೆ ಇದು ಖತಂ ಆಗಲಿದೆ. ಇದರಲ್ಲೇನು ಅನುಮಾನ ಬೇಡ. ಎಲ್ಲ ಧರ್ಮಗಳಿಗೆ ಗೌರವ ಕೊಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳುತ್ತಾರೆ. ಮೈಕ್ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ ಎಂದು ಪ್ರಶ್ನಿಸಿದರು.
ನಮ್ಮ ದೇವಸ್ಥಾನಗಳಲ್ಲೂ ಪೂಜೆ ಮಾಡುತ್ತೇವೆ. ಶ್ಲೋಕ, ಭಜನೆಗಳನ್ನು ಹೇಳಲಾಗುತ್ತದೆ. ಅವರಿಗಿಂತ ಹೆಚ್ಚು ಭಕ್ತಿ ನಮ್ಮಲ್ಲೂ ಇದೆ. ಪ್ರಪಂಚದಲ್ಲಿ ಧರ್ಮವನ್ನು ಉಳಿಸುವಂಥಹ ದೇಶ ಭಾರತ ಮಾತ್ರ. ಆದರೆ ಮೈಕ್ ಹಿಡ್ಕೊಂಡು ಮಾತ್ರ ಹೇಳಿದರೆ ಅವನಿಗೆ ಕಿವುಡಾ ಎಂದು ಕೇಳಬೇಕಾಗುತ್ತದೆ. ಆದ್ದರಿಂದ ಈ ಸಮಸ್ಯೆ ಆದಷ್ಟು ಬೇಗ ಪರಿಹಾರ ಆಗಬೇಕು ಎಂದು ಈಶ್ವರಪ್ಪ ಹೇಳಿದ್ದಾರೆ.