ಪುತ್ತೂರು ಬೈಪಾಸ್ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸರ್ಪವೊಂದು ವಾಹನ ಅಪಘಾತದಲ್ಲಿ ಮೃತಪಟ್ಟಿದ್ದು, ಈ ಕುರಿತು ಸರ್ಪ ಸಂಸ್ಕಾರ ಕಾರ್ಯ ಭಾನುವಾರ ಬೈಪಾಸ್ ರಸ್ತೆಯಲ್ಲಿರುವ ಅಪೂರ್ವ ಸೆಂಟರ್ ಬಳಿ ಇರುವ ಸತೀಶ್ ರೈ ಎಂಬವರ ಮನೆಯಲ್ಲಿ ನಡೆಯಿತು.
ಕೆಮ್ಮಿಂಜೆ ವೇ.ಮೂ. ಶ್ರೀಕೃಷ್ಣ ಕಲ್ಲೂರಾಯ ಅವರ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯಿತು.
ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು. ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು.
























