ಪತನಗೊಂಡ ವಿಮಾನದ ಎರಡನೇ ಬ್ಲ್ಯಾಕ್ ಬಾಕ್ಸ್ ಪತ್ತೆ

ಅಪಘಾತದ ನಿಖರ ಕಾರಣ ತಿಳಿಯುವ ಸಾಧ್ಯತೆ

ಅಹಮದಾಬಾದ್‌: ಕಳೆದ ಗುರುವಾರ ಮಧ್ಯಾಹ್ನ ಟೇಕಾಫ್‌ ಆದ ಬೆನ್ನಲ್ಲೇ ವಿಮಾನ ನಿಲ್ದಾಣದ ಬಳಿಯಿರುವ ಮೇಘನಿನಗರದ ಬಿ.ಜೆ ವೈದ್ಯಕೀಯ ಕಾಲೇಜಿನ ಆವರಣದಲ್ಲಿ ಪತನಗೊಂಡಿದ್ದ ಏ‌ರ್ ಇಂಡಿಯಾ ಬೋಯಿಂಗ್ 787-8 ವಿಮಾನದ 2ನೇ ಬ್ಲ್ಯಾಕ್ ಬಾಕ್ಸ್ ಭಾನುವಾರ ಪತ್ತೆಯಾಗಿದೆ.

ವಿಮಾನದಲ್ಲಿ 2 ಬ್ಲ್ಯಾಕ್ ಬಾಕ್ಸ್‌ಗಳಿದ್ದವು. ವಿಮಾನದ ಫ್ಲೈಟ್‌ ಡೇಟಾ ರೆಕಾರ್ಡರ್ ಶುಕ್ರವಾರ ಪತ್ತೆಯಾಗಿತ್ತು. ʻಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ʼ ಭಾನುವಾರ ಪತ್ತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಹಿರಿಯ ಸಹಾಯಕ ಪಿ.ಕೆ. ಮಿಶ್ರಾ ತಿಳಿಸಿದ್ದಾರೆ. 2ನೇ ಬ್ಲ್ಯಾಕ್‌ ಬಾಕ್ಸ್‌ ಪ್ರಕರಣದ ಪ್ರತಿ ಸೆಕೆಂಡ್‌ನಲ್ಲಿ ಏನಾಯಿತು ಎಂಬುದನ್ನ ಅರ್ಥಮಾಡಿಕೊಳ್ಳಲು ಸಹಾಯಕವಾಗಲಿದೆ. ಇದು ಕಾಕ್‌ಪಿಟ್‌ ಮತ್ತು ವಿಮಾನ ವ್ಯವಸ್ಥೆಯಲ್ಲಿ ಏನಾಯಿತು ಎಂಬುದರ ಕುರಿತು ನಿಖರ ಮಾಹಿತಿಯನ್ನು ನೀಡುತ್ತದೆ. ಎಲ್ಲ ಕಾಕ್‌ಪಿಟ್ ಆಡಿಯೋ, ಪೈಲಟ್ ಸಂಭಾಷಣೆಗಳು, ರೇಡಿಯೊ ಪ್ರಸರಣಗಳು ಹಾಗೂ ಇತರ ಯಾಂತ್ರಿಕ ಶಬ್ದದ ಮಾಹಿತಿಯನ್ನು ಸಂಗ್ರಹಿಸಿರುತ್ತದೆ.





















































 
 

ಜೂನ್ 12ರಂದು ಅಹಮಾದಾಬಾದ್‌ನ ಸರ್ದಾರ್ ವಲ್ಲಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 13.38ಕ್ಕೆ ಲಂಡನ್‌ಗೆ ಹೊರಟಿದ್ದ AI171 ವಿಮಾನ ಪತನಗೊಂಡಿದೆ. ಅಹಮದಾಬಾದ್‌ನಿಂದ ಹೊರಟ 12 ವರ್ಷದ ಹಳೆಯ ಬೋಯಿಂಗ್ 787-8 ವಿಮಾನ 230 ಪ್ರಯಾಣಿಕರು ಹಾಗೂ 12 ಸಿಬ್ಬಂದಿಯನ್ನ ಹೊತ್ತೊಯ್ಯುತ್ತಿತ್ತು. ವಿಮಾನ ಟೇಕ್‌ಆಫ್ ಆದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಯಿತು.

ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನವು ರನ್ ವೇ 23ರಿಂದ ವಿಮಾನ ಟೇಕಾಫ್ ಆಗಿತ್ತು. ಹಾರಿದ ಮೂರ್ನಾಲ್ಕು ನಿಮಿಷಗಳಲ್ಲೇ ಪೈಲಟ್ `ಮೇ ಡೇ.. ಮೇ ಡೇ…’ ಎಂದು ಎಟಿಸಿಗೆ ಕೊನೆಯ ಸಂದೇಶ ಕೊಟ್ಟಿದ್ದರು. ಮೇ ಡೇ ಅಂದ್ರೆ ವಿಮಾನ ಡೇಂಜರ್‌ನಲ್ಲಿದ್ದು ತುರ್ತು ಅವಶ್ಯಕತೆ ಬಗ್ಗೆ ಎಮರ್ಜೆನ್ಸಿ ಕರೆ ಮಾಡುವುದು. ಎಟಿಸಿ ಮತ್ತೆ ಕರೆ ಮಾಡಿದಾಗ ವಾಪಸ್ ಪ್ರತಿಕ್ರಿಯೆ ಬಂದಿರಲಿಲ್ಲ. ಪೈಲಟ್ ಮೇ ಡೇ ಸಂದೇಶ ಕೊಟ್ಟ ಕೆಲವೇ ಕ್ಷಣಗಳಲ್ಲಿ ವಿಮಾನ ಪತನಗೊಂಡಿತ್ತು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top