ಲೈವ್ನಿಂದ ಎದ್ದು ಓಡಿಹೋಗಿ ಬಚಾವಾದ ನಿರೂಪಕಿ
ಟೆಹ್ರಾನ್: ತನ್ನ ನಾಗರಿಕರನ್ನು ಗುರಿಯಾಗಿಸಿ ದಾಳಿ ಮಾಡಿದ್ದಕ್ಕೆ ಸಿಟ್ಟಾಗಿರುವ ಇಸ್ರೇಲ್ ಟೆಹ್ರಾನ್ನಲ್ಲಿರುವ ಇರಾನಿನ ಸರ್ಕಾರಿ ಟಿವಿ ವಾಹಿನಿ ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಬ್ರಾಡ್ಕಾಸ್ಟಿಂಗ್ (ಐಆರ್ಐಬಿ) ಕಚೇರಿಯ ಮೇಲೆಯೇ ಬಾಂಬ್ ದಾಳಿ ನಡೆಸಿದೆ. ಐಆರ್ಐಬಿ ನಿರೂಪಕಿಯೊಬ್ಬರು ಇಸ್ರೇಲ್ ದಾಳಿ ಕುರಿತಂತೆ ಸುದ್ದಿ ಓದುತ್ತಿದ್ದರು. ಈ ಸಂದರ್ಭದಲ್ಲೇ ಇಸ್ರೇಲ್ ಐಆರ್ಐಬಿ ಕಟ್ಟಡದ ಮೇಲೆಯೇ ಇಸ್ರೇಲ್ ವಾಯುಸೇನೆ ಬಾಂಬ್ ದಾಳಿ ನಡೆಸಿದೆ. ನಿರೂಪಕಿ ಎದ್ದು ಓಡುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ನಿನ್ನೆಯಿಂದೀಚೆಗೆ ಭಾರಿ ವೈರಲ್ ಆಗಿದೆ.
ನಿರೂಪಕಿ ಇಸ್ರೇಲ್ ದಾಳಿಯ ಭೀಕರತೆಯನ್ನು ವಿವರಿಸುತ್ತಿರುವಾಲೇ ಟಿವಿ ವಾಹಿನಿಯ ಮೇಲೆ ಕ್ಷಿಪಣಿಒ ಬಂದೆರಗಿದ್ದು, ನಿರೂಪಕಿ ಕುಳಿತ ಸ್ಥಳಕ್ಕೆ ಕಟ್ಟಡದ ಅವಶೇಷಗಳು ಬಂದು ಬೀಳುತ್ತಿರುವದು ವಿಟಿಯೋದಲ್ಲಿ ಲೈವ್ ಆಘಿ ಕಾಣಿಸಿದೆ. ಗೋಡೆಗಳು ಉದುರುತ್ತಿರುವ ದೃಶ್ಯ ಸ್ಟುಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದಾಳಿ ಆಗುತ್ತಿದ್ದಂತೆ ನಿರೂಪಕಿ ಓಡಿ ಹೋಗಿದ್ದಾರೆ.
ಇಸ್ರೇಲ್-ಇರಾನ್ ದೇಶಗಳ ಮಧ್ಯೆ ಯುದ್ಧ ತಾರಕಕ್ಕೇರಿದ್ದು ಸುಮಾರು 2,000 ಕಿ.ಮೀ. ದೂರ ಇದ್ದರೂ ಎರಡೂ ರಾಷ್ಟ್ರಗಳು ಪರಸ್ಪರ ಖಂಡಾಂತರ ಕ್ಷಿಪಣಿಗಳು, ಡ್ರೋನ್ಗಳ ಮೂಲಕ ಸಂಘರ್ಷ ನಡೆಸುತ್ತಿವೆ. 4 ದಿನಗಳ ಈ ಯುದ್ಧದಲ್ಲಿ ಎರಡೂ ಕಡೆ ಈವರೆಗೆ 300ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರೆ, 1,300ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.
ಇಸ್ರೇಲ್ನ ಹೈಫಾ, ಟೆಲ್ಅವಿವ್ ಮೇಲೆ ಇರಾನ್ ಕ್ಷಿಪಣಿ ದಾಳಿ ಮಾಡಿದೆ. ಹೈಫಾದ 2 ಪವರ್ ಪ್ಲಾಂಟ್ಗಳನ್ನು ಧ್ವಂಸಗೊಳಿಸಿದೆ. ಟೆಲ್ಅವಿವ್ನ ಪ್ರಧಾನಿ ನೆತನ್ಯಾಹು ಮನೆ ಮೇಲೆ ಮಿಸೈಲ್ ದಾಳಿ ಮಾಡಿದೆ. ನೆತನ್ಯಾಹು ಪಾರಾಗಿದ್ದಾರೆ. ಬೆನ್ನಲ್ಲೇ ಇಸ್ರೇಲ್ ಆಕ್ರಮಣವನ್ನು ಮತ್ತಷ್ಟು ತೀವ್ರಗೊಳಿಸಿದೆ. ಇರಾನ್ನ ತೈಲ-ಅನಿಲ ಘಟಕ, ಮಿಲಿಟರಿ ಸೆಂಟರ್ಗಳ ಮೇಲೆ ಇಸ್ರೇಲ್ ಬಾಂಬ್ ಮಳೆ ಸುರಿಸಿದೆ. ಇರಾನ್ನ ನಾಲ್ವರು ಗುಪ್ತಚರ ಅಧಿಕಾರಿಗಳು ಬಲಿಯಾಗಿದ್ದಾರೆ.
ಟೆಹ್ರಾನ್ನಲ್ಲಿರುವ ಶಹರಾನ್ ತೈಲ ಸಂಗ್ರಹಗಾರ ಧ್ವಂಸಗೊಳಿಸಿದೆ, ವಿದ್ಯುತ್, ಇಂಟರ್ನೆಟ್ ಸೇವೆ ಸ್ಥಗಿತಗೊಂಡಿದೆ. ಅಷ್ಟೇ ಅಲ್ಲ, ವಿಶ್ವದ ಅತಿದೊಡ್ಡ ಅನಿಲ ಕ್ಷೇತ್ರ ಸೌತ್ ಪಾರ್ಸ್ನಲ್ಲಿ ಅನಿಲ ಉತ್ಪಾದನೆಯನ್ನ ಸ್ಥಗಿತಗೊಳಿಸಿದೆ. ಇದರಿಂದ 12 ಮಿಲಿಯನ್ ಕ್ಯೂಬಿಕ್ ಗ್ಯಾಸ್ ಉತ್ಪಾದನೆ ಬಂದ್ ಆಗಿದ್ದು, ಅನಿಲ ದರ ಹೆಚ್ಚಾಗುವ ಸಾಧ್ಯತೆ ಇದೆ.