ಪುತ್ತೂರು : ಕಟ್ಟಡ ಕಾರ್ಮಿಕರಿಗೆ ವಿವಿಧ ಸವಲತ್ತುಗಳನ್ನು ಸರಕಾರ ನೀಡುತ್ತಿದ್ದು, ಈ ಪೈಕಿ ಕಾರ್ಮಿಕರಿಗೆ ಬಸ್ ಪಾಸ್ ಕೊಡುವ ಕೆಲಸವನ್ನೂ ಮಾಡಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.
ಕುಂಬ್ರದಲ್ಲಿ ಸೋಮವಾರ ನಡೆದ ಒಳಮೊಗ್ರು ಕಟ್ಟಡ ಕಾರ್ಮಿಕರಿಗೆ ಕಾರ್ಡ್ ವಿತರಣಾ ಕಾರ್ಯಕ್ರಮದಲ್ಲಿ ಕಾರ್ಡ್ ವಿತರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ನೂರಕ್ಕೂ ಹೆಚ್ಚು ಕಟ್ಟಡ ಕಾರ್ಮಿಕರಿಗೆ ಕಾರ್ಡ್ ವಿತರಿಸಿದರು.
ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಚನಿಲ ತಿಮಪ್ಪ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಒಳಮೋಗ್ರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರ್, ಕೃಷಿ ಪತಿನ ಸಹಕಾರಿ ಸಂಘದ ಅಧ್ಯಕ್ಷ ಪುರಂದರ ಶೆಟ್ಟಿ, ಶಕ್ತಿ ಕೇಂದ್ರದ ಪ್ರಮುಖ ರಾಜೇಶ್ ರೈ ಪರ್ಪುಜ ಮತ್ತಿತರರು ಉಪಸ್ಥಿತರಿದ್ದರು