ಜೂ. 21 : ಕೆಮ್ಮಿಂಜೆಯಲ್ಲಿ ಎಸ್‌ ಪಿವೈಎಸ್‌ ಎಸ್‌ ಆಶ್ರಯದಲ್ಲಿ ಯೋಗ ದಿನಾಚರಣೆ – ಯೋಗ ಸಂಭ್ರಮ

ಪುತ್ತೂರು: 1980 ರಿಂದ ಉಚಿತ ಶಿಕ್ಷಣ ನೀಡುತ್ತಿರುವ ಪುತ್ತೂರು ತಾಲೂಕಿನ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ನೇತ್ರಾವತಿ ವಲಯ, ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಫೌಂಡೇಶನ್‌, ಆಯುಷ್‌ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತದ ಸಹಯೋಗದೊಂದಿಗೆ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಜೂ. 21ರಂದು ಬೆಳಗ್ಗೆ ಗಂಟೆ 5.00ರಿಂದ 7.00ರವರೆಗೆ ನಡೆಯಲಿದೆ.

ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ ಧ್ಯೇಯೋದ್ಧೇಶದೊಂದಿಗೆ ಯೋಗ ದಿನಾಚರಣೆ ನಡೆಯಲಿದೆ.

ಬಿಸಿರೋಡ್‌, ಕಲ್ಲಡ್ಕ, ಉಪ್ಪಿನಂಗಡಿ, ಅಲಂಕಾರು, ಸುಬ್ರಹ್ಮಣ್ಯ, ಪಂಜ ಮತ್ತು ಪುತ್ತೂರು ತಾಲೂಕಿನ ಎಲ್ಲಾ ಯೋಗ ಬಂಧುಗಳು, ಇತರ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 750ಕ್ಕೂ ಮಿಕ್ಕಿ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top