ಕೆಐಎಯಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ: ಪ್ರಯಾಣಿಕರು ತಬ್ಬಿಬ್ಬು

ಬೆಂಗಳೂರು: ಹವಾಮಾನ ವೈಪರೀತ್ಯದಿಂದಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ವಿಮಾನ ಹಾರಾಟದಲ್ಲಿ ವ್ಯತ್ಯಯಗಳು ಕಂಡು ಬಂದ ಹಿನ್ನೆಲೆಯಲ್ಲಿ ಕೆಲಕಾಲ ಪ್ರಯಾಣಿಕರು ತಬ್ಬಿಬ್ಬಾಗಿದ್ದರು.

ಇಂಡಿಗೋ ವಿಮಾನವು ತನ್ನ ಪ್ರಯಾಣವನ್ನು ಪೂರ್ಣಗೊಳಿಸಲು 5 ಗಂಟೆ 11 ನಿಮಿಷಗಳನ್ನು ತೆಗೆದುಕೊಂಡಿತು, ಇದು ನಿಗದಿತ ಸಮಯಕ್ಕಿಂತ ಎರಡು ಪಟ್ಟು ಹೆಚ್ಚಾಗಿತ್ತು ಎಂದು ತಿಳಿದುಬಂದಿದೆ.ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ಹಲವು ವಿಮಾನಗಳ ನಿರ್ಗಮನದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ವಿಳಂಬ ಕಂಡು ಬಂದಿತ್ತು. ಈ ನಡುವೆ ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನವನ್ನು ಕೊಯಮತ್ತೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿತ್ತು.

ಬೆಳಿಗ್ಗೆ 6.40 ರಿಂದ 8.15 ರ ನಡುವೆ ವಿಮಾನಗಳ ನಿರ್ಗಮನದಲ್ಲಿ ವಿಳಂಬ ಕಂಡು ಬಂದಿತ್ತು“ಬೆಂಗಳೂರಿನಲ್ಲಿ ಹವಾಮಾನ ವೈಪರೀತ್ಯ ಕಂಡು ಬಂದ ಹಿನ್ನೆಲೆಯಲ್ಲಿ ವಿಮಾನವನ್ನು ಕೊಯಿಮತ್ತೂರಿನಲ್ಲಿ ಲ್ಯಾಂಡ್ ಮಾಡಬೇಕಾಯಿತು. ನಂತರ ವಿಮಾನವು ಬೆಳಗ್ಗೆ 9.03ಕ್ಕೆ ಬೆಂಗಳೂರಿಗೆ ಬಂದಿಳಿಯಿತು ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ಇಂಡಿಗೋ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top