ಗಂಡ – ಹೆಂಡತಿ  ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆ | ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು

ಬಿ.ಸಿ.ರೋಡ್: ಗಂಡ- ಹೆಂಡತಿ  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಬಡಗುಂಡಿ ಎಂಬಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.

ತಿಮ್ಮಪ್ಪ ಮೂಲ್ಯ (50) ಹಾಗೂ ಆತನ ಪತ್ನಿ ಜಯಂತಿ (40) ಇಬ್ಬರು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನ;ಲಾಗಿದೆ.

ಜಯಂತಿ ಅವರ ಮೃತದೇಹ ಕೋಣೆಯಲ್ಲಿ ಮಲಗಿದ ಸ್ಥಿತಿಯಲ್ಲಿ ಕಂಡು ಬಂದರೆ,  ತಿಮ್ಮಪ್ಪ ಅವರು ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜಯಂತಿ ಅವರು ಗರ್ಭಿಣಿ ಯಾಗಿದ್ದು, ಜುಲೈ 2 ರಂದು ಸೀಮಂತ ದಿನ ನಿಗದಿಯಾಗಿತ್ತು. ಆದರೆ ಈ ನಡುವೆ   ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಕುಟುಂಬದವರನ್ನು ದುಖಃತಪ್ತಗೊಳಿಸಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.  ಬಂಟ್ವಾಳ ಗ್ರಾಮಾಂತರ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top