ಸವಣೂರು: ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯ ವಿರುದ್ದ ಜೂನ್ 23 ಸೋಮವಾರ ಸವಣೂರು ಗ್ರಾಮ ಪಂಚಾಯತ್ ಕಚೇರಿ ಮುಂದೆ ಪ್ರತಿಭಟನೆ ನಡೆಯಲಿದೆ.
ಆ ಪ್ರಯುಕ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ಯುವ ಸಭಾಭವನದಲ್ಲಿ ಇಂದು ಸಂಜೆ 6.00 ಗಂಟೆಗೆ ಸರಿಯಾಗಿ ಬಿಜೆಪಿ ಸವಣೂರು, ಪುಣ್ಚಪ್ಪಾಡಿ, ಪಾಲ್ತಾಡಿ ಶಕ್ತಿಕೇಂದ್ರದ ಸಭೆಯನ್ನು ಕರೆಯಲಾಗಿದೆ.
ಸಭೆಗೆ ಶಕ್ತಿಕೇಂದ್ರದ ಪ್ರಮುಖರು ಬೂತ್ ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು, ಮಂಡಲದ ವಿವಿಧ ಪ್ರಮುಖರು, ಗ್ರಾಮ ಪಂಚಾಯತ್‌ನ ಅಧ್ಯಕ್ಷರು, ಸದಸ್ಯರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು, ನಿರ್ದೇಶಕರುಗಳು, ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು, ನಿರ್ದೇಶಕರುಗಳು ಸಭೆಯಲ್ಲಿ ಭಾಗವಹಿಸಬೇಕಾಗಿ ಸಂಘಟಕರು ವಿನಂತಿಸಿದ್ದಾರೆ.
























