ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಇದರ ಎನ್.ಸಿ.ಸಿ. ಆರ್ಮಿ ಮತ್ತು ನೇವಿ ಘಟಕಗಳು, ಎನ್.ಎಸ್.ಎಸ್. ಘಟಕಗಳು, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಎನ್.ಸಿ.ಸಿ. ಘಟಕಗಳು ಮತ್ತು ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ಎನ್.ಸಿ.ಸಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ “ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ” ಎಂಬ ಧ್ಯೇಯವಾಕ್ಯದೊಂದಿಗೆಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ಸಭಾಭವನದಲ್ಲಿ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಆಚರಿಸಲಾಯಿತು.

ಮಾಯ್ ದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ಅ.ವಂ. ಲಾರೆನ್ಸ್ ಮಸ್ಕರೇನ್ಹಸ್ ಉದ್ಘಾಟಿಸಿ ಮಾತನಾಡಿ, ಜೀವನ ಎನ್ನುವಂತದ್ದು ದೇವರ ದೊಡ್ಡ ಕೊಡುಗೆ. ಬದುಕು ಸಾರ್ಥಕವಾಗಬೇಕಾದರೆ ಯೋಗ ಅತ್ಯಗತ್ಯ ಎಂದರು.
ಅತಿಥಿಯಾಗಿ ಸಂತ ಫಿಲೋಮಿನಾ ಪದವಿ ಕಾಲೇಜಿನಪ್ರಾಂಶುಪಾಲ ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ ಮಾತನಾಡಿ, ದೇಹ, ಆತ್ಮ ಮತ್ತು ಮನಸ್ಸುಗಳ ಆರೋಗ್ಯವುಳ್ಳವನು ಸದೃಢನಾಗಿರುತ್ತಾನೆ. ಪ್ರಸ್ತುತ ದಿನಗಳಲ್ಲಿ ಕಾಡುತ್ತಿರುವ ದೊಡ್ಡ ಸಮಸ್ಯೆ ಎಂದರೆ ಮನೋಮಾಲಿನ್ಯ. ಯೋಗ ದೇಹ ಆತ್ಮ ಮತ್ತು ಮನಸ್ಸುಗಳನ್ನು ಶುದ್ದಿಗೊಳಿಸುತ್ತದೆ ಎಂದರು.
ವೇದಿಕೆಯಲ್ಲಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಂ.ಅಶೋಕ್ ರಾಯನ್ ಕ್ರಾಸ್ತಾ, ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ಮುಖ್ಯ ಶಿಕ್ಷಕ ವಂ.ಮಾಕ್ಸಿಂ ಡಿಸೋಜಾ ಉಪಸ್ಥಿತರಿದ್ದರು. ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ಎನ್.ಸಿ.ಸಿ. ನೇವಲ್ ವಿಂಗ್ ಅಧಿಕಾರಿ ಕ್ಲೆಮೆಂಟ್ ಪಿಂಟೋ ಸ್ವಾಗತಿಸಿದರು. ಸಂತ ಫಿಲೋಮಿನಾ ಕಾಲೇಜಿನ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ. ಚಂದ್ರಶೇಖರ್ ಕೆ. ವಂದಿಸಿದರು. ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜಿನ ಎನ್.ಸಿ.ಸಿ.ನೇವಿ ವಿಂಗ್ ಅಧಿಕಾರಿ ತೇಜಸ್ವಿ ಭಟ್ ಕಾರ್ಯಕ್ರಮ ನಿರೂಪಿಸಿದರು.ಸಭಾ ಕಾರ್ಯಕ್ರಮದ ಬಳಿಕ ನಿಮಿಷಗಳ ಪ್ರಾಯೋಗಿಕ ಯೋಗ ಸಂಭ್ರಮಾಚರಣೆ ನಡೆಯಿತು.
























