ಪುತ್ತೂರು: ಯೋಗ ಭಾರತದ ಪ್ರಾಚೀನ ಸಂಪ್ರದಾಯದ ಅಮೂಲ್ಯ ಕೊಡುಗೆಯಾಗಿದೆ. ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವನ್ನು ಪಡೆಯಲು ಪ್ರಾಚೀನ ಮಾರ್ಗವಾಗಿದೆ. ’ಯೋಗ’ ಎಂಬ ಪದದ ಅರ್ಥ ಒಗ್ಗೂಡಿಸುವುದು. ಮನುಷ್ಯನು ತನ್ನ ಮನಸ್ಸು, ದೇಹ ಮತ್ತು ಆತ್ಮವನ್ನು ಒಟ್ಟಿಗೆ ತರಲು ಪ್ರಯತ್ನಿಸುವ ಪ್ರಕ್ರಿಯೆಯಾಗಿದೆ. ಹೀಗಾಗಿ ನಿರ್ಣಾಯಕ ಶಾಂತಿಯನ್ನು ಪಡೆಯುತ್ತದೆ ಎಂದು ಪುತ್ತೂರಿನ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಯೋಗ ಶಿಕ್ಷಕಿ ಶರಾವತೀ ರವಿನಾರಾಯಣ ಹೇಳಿದರು.
ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ವಿಶ್ವಯೋಗ ದಿನಾಚರಣೆಯಲ್ಲಿ ಅವರು ಯೋಗದ ಪ್ರಾಮುಖ್ಯತೆಯನ್ನು ತಿಳಿಸಿದರು.
ವೇದಿಕೆಯಲ್ಲಿ ಪುತ್ತೂರಿನ ಆದಾಯ ತೆರಿಗೆ ಕಛೇರಿಯಲ್ಲಿ ಟ್ಯಾಕ್ಸ್ ಅಸಿಸ್ಟೆಂಟ್ ತೇಜಸ್ವಿ ಮಕಿನ್, ಕಾಲೇಜಿನ ಉಪನ್ಯಾಸಕಿ ಶಶಿಕಲಾ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ವಿವಿಧ ಯೋಗಾಸನದ ಪ್ರಕಾರಗಳನ್ನು ವಿದ್ಯಾರ್ಥಿಗಳಿಗೆ ಶರಾವತೀ ರವಿನಾರಾಯಣ ತಿಳಿಸಿದರು. ವಿದ್ಯಾರ್ಥಿನಿ ಅರ್ಚನಾ ಸ್ವಾಗತಿಸಿ, ವಂದಿಸಿದರು.
























