ಪುತ್ತೂರು: ಬಡವರಿಗೆ ಸರ್ಕಾರದ ಮನೆ ಸಿಗಬೇಕಾದರೆ ಲಂಚ ನೀಡಬೇಕಾದ ಪರಿಸ್ಥಿತಿ ಪ್ರಸ್ತುತ ಒದಗಿ ಬಂದಿದೆ. ರಾಜ್ಯ ಸರಕಾರ ಅಧಿಕಾರ ಬಳಸಿಕೊಂಡು ರಾಜ್ಯವನ್ನು ಲೂಟಿ ಮಾಡುವ ಕಾರ್ಯ ಮಾಡುತ್ತಿದೆ ಎಂದು ವಿಧಾನ ಪರಿಷತ್‌ನ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಆರೋಪಿಸಿದರು.
ಅವರು ಸೋಮವಾರ ಅಮರ್ ಜವಾನ್ ಜ್ಯೋತಿ ಬಳಿ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ರಾಜ್ಯ ಕಾಂಗ್ರೆಸ್ ಸರಕಾರದ ಬೆಲೆ ಏರಿಕೆ ಹಾಗೂ ಜನವಿರೋಧಿ ನೀತಿಯನ್ನು ಖಂಡಿಸಿ ನಗರ ಸಭೆಯ ವ್ಯಾಪ್ತಿಯಲ್ಲಿ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಹಿಂದೆ ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ 24 ಮಂದಿಯ ಕೊಲೆಯಾಗಿತ್ತು. ಈಗಿನ ಸರ್ಕಾರ ಬಂದ ಮೇಲೆ ಒಂದು ಸಮುದಾಯವನ್ನು ಓಲೈಕೆ ಮಾಡುವ ಕೆಲಸ ಮಾತ್ರವಾಗಿದೆ. ರಾಜ್ಯಕ್ಕೆ ಕೇಂದ್ರದಿಂದ ತೆರಿಗೆ ಆಧಾರದಲ್ಲಿ ಶೇ.234 ರಷ್ಟು ಹಣ ಜಾಸ್ತಿ ಬಂದರೆ, ಅನುದಾನ ರೀತಿಯಲ್ಲಿ ಶೇ.259ರಷ್ಟು ಹೆಚ್ಚು ಬಂದಿದೆ. ಜನರಿಗೆ ಸುಳ್ಳು ಹೇಳಿ ಕೇಂದ್ರವನ್ನು ದೂರುವ ದುಸ್ಸಾಹಸಕ್ಕೆ ಇಳಿಸಿದ್ದಾರೆ ಎಂದರು.
ವೇದಿಕೆಯಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಿವಪ್ರಸಾದ್, ನಗರ ಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಉಪಾಧ್ಯಕ್ಷ ಬಾಲಚಂದ್ರ, ಸದಸ್ಯೆ ವಿದ್ಯಾಗೌರಿ ಉಪಸ್ಥಿತರಿದ್ದರು. ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಪೂಜಾರಿ ಬಡಾವು,ಬಿಜೆಪಿ ನಗರ ಮಂಡಲದ ಉಪಾಧ್ಯಕ್ಷ ಯುವರಾಜ್ ಪೆರಿಯತ್ತೋಡಿ, ಭಾಮಿ ಅಶೋಕ್ ಶೆಣೈ, ಜಯಂತಿ ನಾಯಕ್, ನಗರಸಭಾ ಬಿಜೆಪಿ ಸದಸ್ಯರು, ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು, ಬಿಜೆಪಿ ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ, ಜಯಲಕ್ಷ್ಮೀ ಶಗ್ರಿತ್ತಾಯ, ಯು.ಲೋಕೇಶ್ ಹೆಗ್ಡೆ, ನಗರಸಭೆ ಮಾಜಿ ಉಪಾಧ್ಯಕ್ಷ ವಿಶ್ವನಾಥ ಗೌಡ, ಟೌನ್ ಬ್ಯಾಂಕ್ ಉಪಾಧ್ಯಕ್ಷ ಶ್ರೀಧರ್ ಕಣಜಾಲು, ನಿರ್ದೇಶಕಾದ ಚಂದ್ರಶೇಖರ್ ರಾವ್ ಬಪ್ಪಳಿಗೆ, ಶ್ರೀಧರ್ ಪಟ್ಲ, ಸುರೇಶ್ ಶೆಟ್ಟಿ, ಸತೀಶ್ ನಾಕ್ ಪರ್ಲಡ್ಕ, ನಗರ ಯುವ ಮೋರ್ಚಾ ಅಧ್ಯಕ್ಷ ನಿತೇಶ್ ಕಲ್ಲೇಗ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು
























