ಬೆಳಗಾವಿ: ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ತಾನು ಸ್ಪರ್ಧೆ ಮಾಡುವುದಿಲ್ಲ ಎನ್ನುವ ಮೂಲಕ ಶಾಸಕ ಮತ್ತು ಬೆಳಗಾವಿ ಹಾಲು ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಈ ಸಂಬಂಧ ಎದ್ದಿದ್ದ ಎಲ್ಲಾ ರೀತಿಯ ಊಹಾಪೋಹಗಳಿಗೆ ಮುಕ್ತಾಯ ಹಾಡಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಬೆಳಗಾವಿ ಹಾಲು ಒಕ್ಕೂಟದಿಂದ ಕರ್ನಾಟಕ ಹಾಲು ಮಹಾಮಂಡಳಿಗೆ ನಿರ್ದೇಶಕನಾಗಿ ಆಯ್ಕೆಯಾಗುತ್ತೇನೆ ಎಂ ದವರು ಹೇಳಿದ್ದಾರೆ.
ಕಳೆದ ಮೂರು ವರ್ಷಗಳ ಕಾಲ ಕೆಎಂಎಫ್ ಅಧ್ಯಕ್ಷನಾಗಿ ಹೈನುಗಾರರಿಗೆ ಸಾಕಷ್ಟು ಪ್ರಯೋಜನ ಮಾಡಿಕೊಟ್ಟಿದ್ದೇನೆ. ನನ್ನ ಅವಧಿಯಲ್ಲಿ ಮಂಡಳಿಗೆ 15 ಸಾವಿರ ಕೋಟಿಯಿಂದ 20 ಸಾವಿರ ಕೋಟಿ ರೂ. ವರೆಗೆ ವಹಿವಾಟು ನಡೆಸಿದ್ದರ ಬಗ್ಗೆ ನನಗೆ ತೃಪ್ತಿ ಇದೆ ಎಂದು ನುಡಿದಿದ್ದಾರೆ.
























