ತಪ್ಪು ಮಾಡಿದವರನ್ನು ‌ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ : ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು: ಯಾರೇ ತಪ್ಪು ಮಾಡಿರಲಿ, ಅವರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಹಾಸ್ ಹತ್ಯೆ ಮತ್ತು ಅಶ್ರಫ್ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮಾಡಲಾಗಿದೆ. ಹಾಗೆಯೇ ಆರೋಪಿಗಳ ಬಂಧನವೂ ಆಗಿದೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು NIA ತನಿಖೆಗೆ ವಹಿಸಲಾಗಿದ್ದು, ಮುಂದಿನ ತನಿಖೆ ಅವರು ಮಾಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಅಶ್ರಫ್ ಹತ್ಯೆಗೆ ಸಂಬಂಧಿಸಿದ ಹಾಗೆ ಈಗಿರುವ ಸಾಕ್ಷ್ಯಾಧಾರಗಳ ಪ್ರಕಾರ ಯಾರೂ ಪಾರಾಗುವುದು ‌ಸಾಧ್ಯವಿಲ್ಲ. ದ್ವೇಷ ಭಾಷಣ ಮಾಡುವವರ ವಿರುದ್ಧ ಸಹ ಕ್ರಮ ಕೈಗೊಳ್ಳಲಾಗುವುದು. ಅಂತಹವರನ್ನು ವೇದಿಕೆಯಿಂದಲೇ ಬಂಧಿಸುವ ಅವಕಾಶ ಇದೆ. ಅಂತಹವರಿಗೆ ಜಾಮೀನು ಸಿಕ್ಕರೂ ಅಪರಾಧ ಸಾಬೀತು ಮಾಡಿ ಜೈಲಿಗಟ್ಟುವ ಕೆಲಸ ಮಾಡುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.





















































 
 

ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡುವವರಿಗೂ ಇದೇ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದಾರೆ. ಮುಂದಿನ ಎರಡು ದಿನಗಳ ಕಾಲ ತಾವು ಕಚೇರಿಯಲ್ಲೇ ಇದ್ದು, ಯಾವುದೇ ಪ್ರಕರಣಗಳಿಗೆ ಸಂಬಂಧಿಸಿದ ಹಾಗೆ ಸಾಕ್ಷಿಗಳಿದ್ದಲ್ಲಿ ತಂದೊಪ್ಪಿಸಬಹುದು ಎಂದು ಹೇಳಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top