ರಾಜ್ಯ ಸರಕಾರದ ಜನವಿರೋಧಿ ನೀತಿ ವಿರುದ್ಧ ಅಜ್ಜಾವರ ಗ್ರಾಪಂ ಎದುರು ಪ್ರತಿಭಟನೆ | ರಾಜ್ಯ ಸರಕಾರ ಜನರ ಜೀವನ ಹಾಳು ಮಾಡುತ್ತಿದೆ : ಸಂಜೀವ ಮಠಂದೂರು

ಸುಳ್ಯ : ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಅಜ್ಜಾವರ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಸುಳ್ಯ ಬಿಜೆಪಿ ಮಂಡಲ ವತಿಯಿಂದ ಪ್ರತಿಭಟನೆ ಮಾಡಲಾಯಿತು.

ಈ ಪ್ರತಿಭಟನೆಯಲ್ಲಿ ಪುತ್ತೂರಿನ ಮಾಜಿ ಶಾಸಕರಾದ ಸಂಜೀವ ಮಠoದೂರ್ ಭಾಗವಹಿಸಿ ಮಾತನಾಡಿ, ಕಳೆದ 2 ವರುಷದ ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ, ಜನವಿರೋಧಿ ನೀತಿ, ಸ್ವ ಪಕ್ಷಪಾತ ಇವತ್ತು ಕರ್ನಾಟಕದ ಜನರ ಜೀವನವನ್ನ ಹಾಳು ಮಾಡುತ್ತಿದೆ ಎಂದು ಕಾಂಗ್ರೆಸ್ ಸರಕಾರದ ವಿರುದ್ಧ ಗುಡುಗಿದರು.

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಅಜ್ಜಾವರ ಶಕ್ತಿ ಕೇಂದ್ರ ಅಧ್ಯಕ್ಷರಾದ ರಾಜೇಶ್, ಸುಳ್ಯ ಮಂಡಲದ ಶುಭೋದ್, ಮಾಜಿ ತಾಲೂಕ್ ಪಂಚಾಯತ್ ಅಧ್ಯಕ್ಷ ಚಣಿಯ ಕಳ್ತಡ್ಕ, ಜಯಂತಿ ಮತ್ತು ಪಕ್ಷದ ಕಾರ್ಯಕರ್ತರು ಮತ್ತು ಪಧಾಧಿಕಾರಿಗಳು ಉಪಸ್ಥಿತರಿದ್ದರು.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top