ಪುತ್ತೂರು: ಭಾರತದ ಅತೀ ದೊಡ್ಡ ತೆಂಗು ರೈತರ ಸಂಸ್ಥೆ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪೆನಿಯ ವಾರ್ಷಿಕ ಮಹಾಸಭೆ ಜು.26 (ನಾಳೆ) ಗುರುವಾರ ಜೈನ ಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ 10 ಗಂಟೆಗೆ ನಡೆಯುವ ಸಭೆಯಲ್ಲಿ ವಾರ್ಷಿಕ ವರದಿ ವಾಚನ, 2023-24ನೇ ಸಾಲಿನ ಹಣಕಾರು ವರದಿಗಳ ಅಂಗೀಕಾರ, ಭವಿಷ್ಯದ ಯೋಜನೆಗಳ ಕುರಿತು ಮಾಹಿತಿ ನೀಡಲಾಗುವುದು.
ಮಹಾಸಭೆಯಲ್ಲಿ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಸ್ಥೆಯ ಅಧ್ಯಕ್ಷ ಕುಸುಮಾಧರ್ ಎಸ್.ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
























