ಪುತ್ತೂರು: ತಾಲೂಕಿನ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮ ನಾಳೆ(ಜೂ.26) ಸಂಸ್ಥೆಯ ಗೋಪಾಲಕೃಷ್ಣ ಸಭಾಭವನದಲ್ಲಿ ನಡೆಯಲಿದೆ.
ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಅಧ್ಯಕ್ಷ ಎಸ್ ಜಯರಾಮ್ ಕೆದಿಲಾಯ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಅಂಬಿಕಾ ವಿದ್ಯಾಸಂಸ್ಥೆ ಸದಸ್ಯ ಕೆ.ಸುರೇಶ್ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ.
ಸಾಂದೀಪನಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಎಸ್ .ಜಿ ಕೃಷ್ಣ ಪುಸ್ತಕ ಬಿಡುಗಡೆಗೊಳಿಸಲಿದ್ದಾರೆ ಎಂದು ಸಂಸ್ಥೆಯ ಸಂಚಾಲಕ ಭಾಸ್ಕರ್ ಆಚಾರ್ ಹಿಂದಾರ್ ತಿಳಿಸಿದ್ದಾರೆ.
























