ಸುಳ್ಯ: ಕೆಎಸ್ ಆರ್ ಟಿಸಿ ಬಸ್ ಗಳೆರಡು ಮುಖಾಮುಖಿ ಡಿಕ್ಕಿ ಹೊಡದುಕೊಂಡ ಪರಿಣಾಮ ಹಲವರು ಗಾಯಗೊಂಡ ಘಟನೆ ಬುಧವಾರ ಸಂಜೆ ಸುಳ್ಯ ತಾಲೂಕಿನ ಅರಂತೋಡು ಶಾಲಾ ಮುಂಭಾಗ ನಡೆದಿದೆ.
ಮಡಿಕೇರಿಯಿಂದ ಪುತ್ತೂರು ಕಡೆ ಬರುತ್ತಿದ್ದ ಬಸ್ ಎದುರಿನಿಂದ ಬಂದ ಬಸ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತಗೊಂಡ ಬಸ್ ಗಳ ಪೈಕಿ ಒಂದು ಅಶ್ವಮೇಧ ಬಸ್ ಎಂದು ಹೇಳಲಾಗಿದೆ.
























