ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಯುವತಿಯನ್ನು ಗರ್ಭವತಿಯನ್ನಾಗಿಸಿದ ಹಿನ್ನಲೆ ಯುವತಿ ನೀಡಿದ ದೂರಿನಂತೆ ಬಪ್ಪಳಿಗೆ ನಿವಾಸಿ ಕೃಷ್ಣ ಎಂಬವರ ವಿರುದ್ಧ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಕೃಷ್ಣ ಹಾಗೂ ಯುವತಿಗೆ ಹೈ ಸ್ಕೂಲ್ ನಿಂದಲೇ ಪರಿಚಯವಿದ್ದು ಬಳಿಕ ಪರಸ್ಪರ ಪ್ರೀತಿಸುತ್ತಿದ್ದು 2024 ರ ಅಕ್ಟೋಬರ್ ತಿಂಗಳಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆಗೆ ಬರ ಹೇಳಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆ.
ಬಳಿಕ 2025 ಜನವರಿಯಲ್ಲಿ ಮನೆಗೆ ಬರಲು ಹೇಳಿ ಮತ್ತೆ ಬಲವಂತವಾಗಿ ದೈಹಿಕ ಸಂಪರ್ಕ ಮಾಡಿರುತ್ತಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ. ಪರಿಣಾಮ ಆಕೆ ಗರ್ಭಿಣಿಯಾಗಿರುವ ವಿಚಾರ ತಿಳಿದು ಆಗಲೂ ಆತ ಮದುವೆಯಾಗುವುದಾಗಿ ನಂಬಿಸಿದ್ದ ಎಂದು ಆತನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ ಎಂದು ತಿಳಿದು ಬಂದಿದೆ.
























